
ರೇಣುಕಾಸ್ವಾಮಿ ಕೇಸ್‌ನಲ್ಲಿ (Renukaswamy case) ನಟ ದರ್ಶನ್ ತೂಗುದೀಪ ಅವರು ಸದ್ಯ ಜೈಲಿನಲ್ಲಿದ್ದಾರೆ. ಆದರೆ, ಜೈಲಿನಲ್ಲಿ ಸರಿಯಾದ ವ್ಯವಸ್ಥೆ ನೀಡುತ್ತಿಲ್ಲ ಎಂದು ಕೋರ್ಟ್ನಲ್ಲಿ ನ್ಯಾಯಾಧೀಶರ ಎದುರು ಅಳಲು ತೋಡಿಕೊಂಡಿದ್ದ ನಟ, “ಜೈಲಿನಲ್ಲಿ ನಾನು ಬೆಳಕು ನೋಡಿಲ್ಲ. ದಯಮಾಡಿ ನನಗೆ ವಿಷ ಕೊಡಿ” ಎಂದು ಹೇಳಿದ್ದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ವಿಚಾರಣೆಗೆ ಹಾಜರಾಗಿದ್ದರು. ಆ ವೇಳೆ ಅವರು, “ಜೈಲಿನಲ್ಲಿ ಏನೂ ಕೇಳಿದರೂ ಸಿಗುತ್ತಿಲ್ಲ. ಹೀಗಾಗಿ ನನಗೆ ಸ್ವಲ್ಪ ವಿಷ ಕೊಡಿ” ಎಂದು ಅವರು ಹೇಳಿದ್ದರು. ಈ ಮೂಲಕ ತಾವು ಜೈಲಿನಲ್ಲಿ ಅಕ್ಷರಶಃ ನರಕಯಾತನೆ ಅನುಭವಿಸುತ್ತಿರುವುದಾಗಿ ಹೇಳಿಕೊಂಡಿದ್ದರು.
ಇದಕ್ಕೆ ದರ್ಶನ್ ಅಭಿಮಾನಿಗಳು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿರುವ ನಡುವೆಯೇ, ಅವರ ಆಪ್ತರಲ್ಲಿ ಒಬ್ಬರಾಗಿರುವ, ನಟ- ನಿರ್ದೇಶಕ ತರುಣ್ ಸುಧೀರ್ (Tharun Sudhir) ಅವರು ಈ ಬಗ್ಗೆ ಮಾತನಾಡಿದ್ದಾರೆ. ಕೋರ್ಟ್ನಲ್ಲಿ ನಡೆದ ಪ್ರೊಸೀಡಿಂಗ್ಸ್ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ಆದರೆ ಒಂದು ವೇಳೆ ದರ್ಶನ್ ಅವರಂಥ ವ್ಯಕ್ತಿನೇ ವಿಷ ಕೇಳ್ತಾರೆ ಅಂದ್ರೆ ಎಷ್ಟು ನೊಂದಿರಬೇಕು ಎಂದು ಪ್ರಶ್ನಿಸಿದ್ದಾರೆ. ನಾನು ನೋಡಿದ ಹಾಗೆ ಅವರು ತುಂಬಾ ಸ್ಟ್ರಾಂಗ್. ಆದರೂ ಅವರ ಬಾಯಲ್ಲಿಯೇ ಈ ಮಾತು ಬಂದಿದೆ ಎಂದು ಎಷ್ಟು ಕಷ್ಟ ಅನುಭವಿಸುತ್ತಿರಬೇಕು ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: Bhavana Ramannaಗೆ ಮೊದಲೇ ವಿಷ್ಯ ಗೊತ್ತಿತ್ತಾ? ಒಂದೇ ಹೆಣ್ಣು ಮಗುವಿನ ಹೆಸರು ರಿವೀಲ್ ಮಾಡಿದ್ದ ನಟಿ
'ದರ್ಶನ್ ಸರ್ ಇನ್ನೂ ಈ ಕೇಸ್‌ನಲ್ಲಿ ಆಪಾದಿತ ಅಷ್ಟೇ, ಅಪರಾಧಿ ಅಲ್ಲ. ಹಾಗಾಗಿ ಅಲ್ಲಿ ಏನೆಲ್ಲ ಮೂಲ ಸೌಕರ್ಯಗಳಿರುತ್ತೋ ಅವು ಸಿಗಬೇಕು. ನಾನು ಕೂಡ ಚೌಕ ಸಿನಿಮಾದ ಸಂದರ್ಭದಲ್ಲಿ ಶೂಟಿಂಗ್ನ ಅರ್ಧಭಾಗ ಜೈಲಿನಲ್ಲೇ ಕಳೆದಿದ್ದೇನೆ. ಜೈಲಿನಲ್ಲಿ ಹೇಗೆಲ್ಲ ಇರುತ್ತೆ ಅನ್ನೋದನ್ನ ನಾನು ಆ ಸಂದರ್ಭದಲ್ಲಿ ಚೆನ್ನಾಗಿ ನೋಡಿದ್ದೀನಿ ಎಂದಿರುವ ತರುಣ್ ಅವರು, ಎಲ್ಲ ಕೈದಿಗಳಿಗೂ ಇರುವ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎನ್ನುವ ನಿಯಮವೇ ಇದೆ. ಅವುಗಳನ್ನು ಯಾರೂ ಕಸಿದುಕೊಳ್ಳಲು ಆಗುವುದಿಲ್ಲ. ಆ ಹಕ್ಕು ಎಲ್ಲರಿಗೂ ಸಿಗಬೇಕಾಗುತ್ತೆ. ಆದರೆ ಅದಕ್ಕೂ ಮೀರಿ ಜೈಲಿನಲ್ಲಿ ದರ್ಶನ್ ಅವರಿಗೆ ಬೇರೆ ಏನೋ ಆಗಿದೆ ಅಂದ್ರೆ, ನಿಜಕ್ಕೂ ನನಗೂ ನೋವಾಗುತ್ತೆ' ಎಂದಿದ್ದಾರೆ.
ಅಷ್ಟಕ್ಕೂ ದರ್ಶನ್ ಅವರು ತುಂಬಾ ಸ್ಟ್ರಾಂಗ್. ಅವರನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಯಾವತ್ತೂ ಏನೇ ನೋವಿದ್ರೂ ಹೊರಗೆ ತೋರಿಸಿಕೊಳ್ಳಲ್ಲ. ಯಾವಾಗಲೂ ನೋವನ್ನ ಒಳಗಡೆಯೇ ಇಟ್ಟುಕೊಂಡಿರುತ್ತಾರೆ. ಯಾರ ಬಳಿಯೂ ಹಂಚಿಕೊಳ್ಳುವ ವ್ಯಕ್ತಿ ಅವರಲ್ಲ. ಹಾಗಿರುವಾಗ ಅವರೇ ವಿಷ ಕೇಳುತ್ತಿದ್ದಾರೆ ಅಂದ್ರೆ, ಪರಿಸ್ಥಿತಿ ಎಷ್ಟರ ಮಟ್ಟಿಗೆ ಹೋಗಿರಬೇಕು ಎಂದು ನೋವಿನಿಂದ ನುಡಿದಿದ್ದಾರೆ ತರುಣ್ ಸುಧೀರ್.
ಇದನ್ನೂ ಓದಿ: ಮಗೆ- ಸೊಸೆಯನ್ನು ಮನೆಯಿಂದ ಹೊರಕ್ಕೆ ಹಾಕಿದ್ಮೇಲೆ ಶಕುಂತಲಾ ಲುಕ್ಕೇ ಚೇಂಜ್ ಆಗೋಯ್ತು ನೋಡ್ರಪ್ಪಾ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ