ಲೋಕಾಯುಕ್ತ ಡಿವೈಎಸ್‌ಪಿ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ ಮಾಡಿದ್ದು ವಜಾಗೊಂಡಿರೋ ರಿಸರ್ವ್ ಪೊಲೀಸ್! ಸಿಕ್ಕಿಬಿದ್ದಿದ್ದು ಹೇಗೆ?

Published : Feb 24, 2025, 07:09 AM ISTUpdated : Feb 24, 2025, 07:27 AM IST
ಲೋಕಾಯುಕ್ತ ಡಿವೈಎಸ್‌ಪಿ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್‌ ಮಾಡಿದ್ದು ವಜಾಗೊಂಡಿರೋ ರಿಸರ್ವ್ ಪೊಲೀಸ್! ಸಿಕ್ಕಿಬಿದ್ದಿದ್ದು ಹೇಗೆ?

ಸಾರಾಂಶ

 w

ಬೆಂಗಳೂರು (ಫೆ.24): ಲೋಕಾಯುಕ್ತ ಡಿವೈಎಸ್‌ಪಿ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಹಣಕ್ಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಬೆಳಗಾವಿ ಮೂಲದ ಮುರುಗಪ್ಪ ನಿಂಗಪ್ಪ ಕುಂಬಾರ್‌(56) ಎಂದು ಗುರುತಿಸಲಾಗಿದೆ. ಈತ ಸೇವೆಯಿಂದ ವಜಾಗೊಂಡಿರುವ ರಿಸರ್ವ್‌ ಪೊಲೀಸ್‌ ಕಾನ್‌ಸ್ಟೇಬಲ್‌ ಆಗಿದ್ದು, ಈತನ ವಿರುದ್ಧ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ 60ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಸದ್ಯ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ ಮೇಲ್‌ ಪ್ರಕರಣವೊಂದರಲ್ಲಿ ಮುದ್ದೆಬಿಹಾಳ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ವಿಧಾನಸೌಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಬಾಡಿ ವಾರೆಂಟ್‌ ಮೇರೆಗೆ ಶೀಘ್ರದಲ್ಲೇ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಾಯುಕ್ತ ಅಧಿಕಾರಿಯ ಸೋಗಿನಲ್ಲಿ ವ್ಯಕ್ತಿಯೊಬ್ಬ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಅಕ್ರಮ ಆಸ್ತಿ ಸಂಬಂಧ ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗುತ್ತಿದೆ. ಪ್ರಕರಣ ದಾಖಲಾಗದಂತೆ ನೋಡಿಕೊಳ್ಳಬೇಕಾದರೆ, ಹಣ ನೀಡುವಂತೆ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದಾನೆ ಎಂದು ಲೋಕಾಯುಕ್ತ ಡಿವೈಎಸ್ಪಿ ಬಸವರಾಜು ಮುಗದುಮ್‌ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ತನಿಖೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಆನ್‌ಲೈನ್ ಟ್ರೇಡಿಂಗ್ ಹೆಸರಲ್ಲಿ ಮಹಿಳೆಗೆ ₹4 ಕೋಟಿ ವಂಚಿಸಿದ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಪತ್ತೆಯಾಗಿದ್ದು ಹೇಗೆ?:

ಆರೋಪಿಯ ಮೊಬೈಲ್‌ ಸಂಖ್ಯೆಯನ್ನು ಟ್ರೂ ಕಾಲರ್‌ನಲ್ಲಿ ಪರಿಶೀಲಿಸಿದಾಗ ಲೋಕಾಯುಕ್ತ ಡಿವೈಎಸ್ಪಿ ಎಂದು ತೋರಿಸುತ್ತಿತ್ತು. ಲೊಕೇಶನ್‌ ಪರಿಶೀಲನೆ ವೇಳೆ ಮಹಾರಾಷ್ಟ್ರದ ಶಿರೋಲ್‌ ಎಂದು ತೋರಿಸುತ್ತಿತ್ತು. ಹೀಗಾಗಿ ವಿಧಾನಸೌಧ ಪೊಲೀಸರು ಆ ಮೊಬೈಲ್‌ ಸಂಖ್ಯೆಯ ಮತ್ತು ಲೊಕೇಶನ್‌ ವಿಳಾಸವನ್ನು ಶಿರೋಲ್‌ ಪೊಲೀಸರಿಗೆ ಕಳುಹಿಸಿದ್ದರು. ಶಿರೋಲ್‌ ಪೊಲೀಸರು ಪರಿಶೀಲನೆ ಮಾಡಿದಾಗ ಆ ಸಿಮ್‌ ಕಾರ್ಡ್‌ ಮುದ್ದೆಬಿಹಾಳ ಪೊಲೀಸರು ಜಪ್ತಿ ಮಾಡಿರುವುದು ಗೊತ್ತಾಗಿದೆ. ಮುದ್ದೆಬಿಹಾಳ ಪೊಲೀಸರನ್ನು ಸಂಪರ್ಕಿಸಿದಾಗ ಆ ಸಿಮ್‌ ಬಳಸುತ್ತಿದ್ದ ವ್ಯಕ್ತಿ ಮುರುಗಪ್ಪ ಎಂಬುದು ಗೊತ್ತಾಗಿದೆ. ಸದ್ಯ ಆತ ಪ್ರಕರಣವೊಂದರಲ್ಲಿ ಜೈಲಿನಲ್ಲಿರುವ ವಿಚಾರ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟೊರೆಂಟೋ ವಿವಿ ಆವರಣದಲ್ಲಿ ಭಾರತೀಯ ಸಂಶೋಧನಾ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ
ಬೆಂಗಳೂರು ರಸ್ತೆಯಲ್ಲಿ ಯುವತಿಯನ್ನು ಬೈಕ್‌ನಲ್ಲಿ ಬೆನ್ನಟ್ಟಿ ಕಿರುಕುಳ ಕೊಟ್ಟ ಮೂವರು ಕಿಡಿಗೇಡಿಗಳು!