
ಬಳ್ಳಾರಿ(ಮಾ.06): ಬೆಂಗಳೂರಿನ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ಕಳೆದ 6 ತಿಂಗಳಿಂದ ಬಂಧಿತರಾಗಿದ್ದ 29 ಆರೋಪಿಗಳು ಶುಕ್ರವಾರ ರಾತ್ರಿ ಬಿಡುಗಡೆಯಾಗಿದ್ದಾರೆ.
ಈ ವೇಳೆ ಮಾಧ್ಯಮ ಪ್ರತಿನಿಧಿಗಳಿಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಆರೋಪಿಗಳು, ‘ಪ್ರಕರಣದಲ್ಲಿ ನಾವು ಭಾಗಿಯಾಗಿಲ್ಲ. ನಾವು ನಿರಪರಾಧಿಗಳಾಗಿದ್ದೇವೆ. ಅಮಾಯಕರಾದ ನಮ್ಮನ್ನು ಬಂಧಿಸಲಾಯಿತು’ ಎಂದಷ್ಟೇ ಹೇಳಿದ್ದಾರೆ.
ಕೆ.ಜಿ.ಹಳ್ಳಿ ಕೇಸ್ ಸಿಬಿಐ ತನಿಖೆಗೆ ಕೋರಿದ್ದ ಉದ್ಯಮಿಗೆ ಲಕ್ಷ ದಂಡ
ಆರೋಪಿಗಳನ್ನು ಕರೆದೊಯ್ಯಲು ಬಂದಿದ್ದ ಪೋಷಕರು ಹಾಗೂ ಸಂಬಂಧಿಕರು ಸಂಭ್ರಮ ಪಟ್ಟರು. ಮೂರು ಸ್ಲೀಪರ್ ಕೋಚ್ ಬಸ್‌ನಲ್ಲಿ ಆರೋಪಿಗಳನ್ನು ಕರೆದೊಯ್ಯಲು ಆಗಮಿಸಿದ್ದ ಕುಟುಂಬ ಸದಸ್ಯರು, ಊಟ, ಸಿಹಿ ತಿಂಡಿಗಳನ್ನು ತಂದಿದ್ದರು. ಬಸ್ ಹತ್ತುತ್ತಿದ್ದಂತೆಯೇ ಆರೋಪಿಗಳನ್ನು ಖುಷಿಯಿಂದ ಸ್ವಾಗತ ಮಾಡಿಕೊಳ್ಳುತ್ತಿರುವ ದೃಶ್ಯ ಇಲ್ಲಿನ ಕೇಂದ್ರ ಕಾರಾಗೃಹದ ಆವರಣದಲ್ಲಿ ರಾತ್ರಿ ಕಂಡು ಬಂತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ