ಶಿವಮೊಗ್ಗ ನಗರದ ಖ್ಯಾತ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದ ಮೃತ ಡಾ.ಲೋಲಿತ್
ಶಿವಮೊಗ್ಗ(ಡಿ.01): ನಗರದ ಖ್ಯಾತ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದಲ್ಲಿ ಇಂದು(ಗುರುವಾರ) ನಡೆದಿದೆ. ಮೂಳೆ ತಜ್ಞ ಡಾ.ಲೋಲಿತ್(40) ಎಂಬುವರೇ ನೇಣಿಗೆ ಶರಣಾದ ದುರ್ದೈವಿಯಾಗಿದ್ದಾರೆ.
ಮೃತ ಡಾ.ಲೋಲಿತ್ ಶಿವಮೊಗ್ಗ ನಗರದ ಖ್ಯಾತ ಖಾಸಗಿ ಆಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದರು ಅಂತ ತಿಳಿದು ಬಂದಿದೆ.
ಹಗರಿಬೊಮ್ಮನಹಳ್ಳಿ: ವಿಷ ಸೇವಿಸಿ ಶಿಕ್ಷಕ ಆತ್ಮಹತ್ಯೆ, ಡೆತ್‌ನೋಟ್‌ನಲ್ಲಿ ಏನಿದೆ?
ಇಂದು ಬೆಳಿಗ್ಗೆ 6 ಗಂಟೆಗೆ ತಮ್ಮ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಡಾ.ಲೋಲಿತ್ ಅವರ ಸಾವಿಗೆ ಅನಾರೋಗ್ಯದ ಕಾರಣ ತಿಳಿದು ಬಂದಿದೆ. ಡಾ.ಲೋಲಿತ್ ಅವರು ಹೃದಯ ಸಂಬಂಧಿ ಖಾಯಿಲೆಯಿಂದ ವೈದ್ಯರು ಬಳಲುತ್ತಿದ್ದರು ಎನ್ನಲಾಗಿದೆ. ತುಂಗಾನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.