
ಬೆಂಗಳೂರು (ಡಿ.20) : ಉದ್ಯಮಿ ಮನೆಯಲ್ಲಿ ಜೋಡಿ ಕೊಲೆ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆದು ಕೋರಮಂಗಲ ಠಾಣೆ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.ಪ್ರಕರಣ ತನಿಖೆ ತೀವ್ರಗೊಳಿಸಿರುವ ಪೊಲೀಸರು, ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಹಾಗೂ ಮೊಬೈಲ್ ಕರೆಗಳ ಮಾಹಿತಿ ಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಮತ್ತೊಂದು ಉದ್ಯಮಿ ರಾಜಗೋಪಾಲ ರೆಡ್ಡಿ ಹಾಗೂ ಅವರ ಕುಟುಂಬದವರನ್ನು ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಕೊಲೆಯಾದ ಸೆಕ್ಯೂರಿಗಾರ್ಡ್ ದಿಲ್ ಬಹದ್ದೂರ್ ಹಾಗೂ ಕೆಲಸಗಾರ ಕರಿಯಪ್ಪ ಅವರ ಪರಿಚಯ, ನಡವಳಿಕೆ, ಸ್ನೇಹಿತರು, ಬಂಧುಗಳ ಬಗ್ಗೆಯೂ ಉದ್ಯಮಿ ರಾಜಗೋಪಾಲ ರೆಡ್ಡಿ ಅವರಿಂದ ಮಾಹಿತಿ ಪಡೆದಿದ್ದಾರೆ.
ಈಗಾಗಲೇ ಆರೋಪಿಗಳ ಪತ್ತೆಗೆ ಐದು ವಿಶೇಷ ತಂಡ ರಚಿಸಿದ್ದು, ಈ ತಂಡಗಳು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಶೋಧ ಕಾರ್ಯದಲ್ಲಿ ತೊಡಗಿವೆ. ಘಟನಾ ಸ್ಥಳದ ಸುತ್ತಮುತ್ತಲ 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿ ಸಂಗ್ರಹಿಸಿ ಪರಿಶೀಲಿಸಲಾಗಿದೆ. ಅಂತೆಯೆ ಘಟನೆ ಪೂರ್ವ ಹಾಗೂ ನಂತರದ ಸಮಯದ ಮೊಬೈಲ್ ಕರೆಗಳ ಮಾಹಿತಿ ಸಂಗ್ರಹಿಸಿದ್ದಾರೆ. ಇದರ ಆಧಾರದ ಮೇಲೆ ಮೂವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
Bengaluru crime: ಉದ್ಯಮಿ ಮನೆಯಲ್ಲಿ ಜೋಡಿ ಕೊಲೆ: ಚಿನ್ನಾಭರಣ ಲೂಟಿ
ಹೆಚ್ಚುವರಿ ಆಯುಕ್ತ ಠಾಣೆಗೆ ಭೇಟಿ:
ಈ ನಡುವೆ ಸೋಮವಾರ ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಮಣ್ಯೇಶ್ವರ ರಾವ್ ಅವರು ಕೋರಮಂಗಲ ಪೊಲೀಸ್ ಠಾಣೆಗೆ ತೆರಳಿ ಪ್ರಕರಣದ ತನಿಖೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪರಿಚಿತರೇ ಈ ಜೋಡಿಕೊಲೆ ಮಾಡಿ ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವುದಾಗಿ ಸುಬ್ರಮಣ್ಯೇಶ್ವರ ರಾವ್ ಹೇಳಿದ್ದಾರೆ.
Bengaluru crime: ಕೆಲಸ ಆಮೀಷವೊಡ್ಡಿ ಅಪಹರಿಸಿದ ಫೇಸ್ಬುಕ್ ಗೆಳೆಯ!
ಕೋರಮಂಗಲ 6ನೇ ಬ್ಲಾಕ್ ನಿವಾಸಿ ಉದ್ಯಮಿ ರಾಜಗೋಪಾಲ ರೆಡ್ಡಿ ಅವರ ಮನೆಯಲ್ಲಿ ಶನಿವಾರ ತಡರಾತ್ರಿ ದುಷ್ಕರ್ಮಿಗಳು ಮನೆಗೆಲಸಗಾರ ಕರಿಯಪ್ಪ ಹಾಗೂ ಸೆಕ್ಯೂರಿಗಾರ್ಡ್ ದಿಲ್ ಬಹದ್ದೂರ್‌ನನ್ನು ಕೊಲೆಗೈದು .5 ಲಕ್ಷ ನಗದು ಹಾಗೂ 100 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ