
ನಾಪೋಕ್ಲು (ಜು.6) ಪಾನಮತ್ತ ಕಾರ್ಮಿಕನೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿ ಹಾಗೂ ಮಗುವಿನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ನಾಪೋಕ್ಲು ಸಮೀಪದ ಕೋಕೇರಿ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಪತ್ನಿ ನೀಡಿದ ದೂರಿನಂತೆ ನಾಪೋಕ್ಲು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ನರಿಯಂದಡ ಗ್ರಾಮ ವ್ಯಾಪ್ತಿಯ ಕೋಕೇರಿ ಗ್ರಾಮದಲ್ಲಿ ಚೆರುವಾಳಂಡ ಲವಿನ್ ಎಂಬವರ ಲೈನ್ ಮನೆಯಲ್ಲಿ ವಾಸವಾಗಿದ್ದ ಭರತ್ ಹಲ್ಲೆ ನಡೆಸಿರುವ ಕಾರ್ಮಿಕ. ಕ್ಷುಲ್ಲಕ ಕಾರಣಕ್ಕೆ ಆರೋಪಿ ಭರತ್ ಪತ್ನಿಯೊಂದಿಗೆ ಜಗಳವಾಡಿ ಪತ್ನಿ, ಮಗುವಿಗೆ ಹಲ್ಲೆ ನಡೆಸಿದ್ದ. ಈ ಬಗ್ಗೆ ಪತ್ನಿ ಪ್ರೇಮ ನಾಪೋಕ್ಲು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು ನಾಪೋಕ್ಲು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಹಾವೇರಿ: ವಿದ್ಯುತ್ ಸ್ಪರ್ಶ, ಎತ್ತು ಉಳಿಸಲು ಹೋಗಿ ರೈತ ಸಾವು!
ಗಾಂಜಾ ಮಾರಾಟ: ಇಬ್ಬರ ಬಂಧನ
ನಾಪೋಕ್ಲು: ಇಲ್ಲಿಗೆ ಸಮೀಪದ ಬೇತು ಗ್ರಾಮದಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ನಾಪೋಕ್ಲು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಬಸ್ ತಂಗುದಾಣದ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಮಡಿಕೇರಿ ನಿವಾಸಿ ಆರ್. ವಿನೋದ್ ಹಾಗೂ ಬೇತು ಗ್ರಾಮದ ವಿಷ್ಣು ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ 230 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಚಿಕ್ಕಮಗಳೂರು: ತಳ್ಳುಗಾಡಿಗೆ ಡಿಕ್ಕಿ ಹೊಡೆದದ್ದಕ್ಕೆ ಚಾಕು ಇರಿತ; ಯುವಕನ ಸ್ಥಿತಿ ಗಂಭೀರ
ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಎಂ. ಜಗದೀಶ್, ಗ್ರಾಮಾಂತರ ವೃತ್ತದ ಸಿಪಿಐ ಅನೂಪ್ ಮಾದಪ್ಪ ಮಾರ್ಗದರ್ಶನದಲ್ಲಿ ನಾಪೋಕ್ಲು ಪಿಎಸ್‌ಐ ಈ. ಮಂಜುನಾಥ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ