ತಪ್ಪಿದ ಭಾರೀ ಅನಾಹುತ; ದುರ್ಗಾಂಬ ಬಸ್ ಪಲ್ಟಿ 15ಕ್ಕೂ ಹೆಚ್ಚು ಜನರು ಗಂಭೀರ ಗಾಯ!

By Ravi Janekal  |  First Published Nov 12, 2024, 6:59 PM IST

ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿನಲ್ಲಿ ನಡೆದಿದೆ.


ಶಿವಮೊಗ್ಗ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿನಲ್ಲಿ ನಡೆದಿದೆ.

ಬಸ್ ಪಲ್ಟಿಯಾದ ಪರಿಣಾಮ ಬಸ್ ನಲ್ಲಿದ್ದ 20 ಪ್ರಯಾಣಿಕರ ಪೈಕಿ 15 ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ರಿಪ್ಪನ್‌ಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

Tap to resize

Latest Videos

undefined

ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಖಾಸಗಿ ಟ್ರಾವೆಲ್ ಬಸ್ ಗೆ ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಂಬುಲೆನ್ಸ್ ಗೆ ಸ್ಥಳೀಯರು ಕರೆ ಮಾಡಿದ್ರೂ ತುಂಬಾ ಸಮಯವಾದರೂ ಆಂಬುಲೆನ್ಸ್ ಬರಲಿಲ್ಲ ಎಂದು ಆರೋಪವೂ ಕೇಳಿಬಂದಿದೆ. 

ವಿವಾಹಿತೆಗಾಗಿ ಗೆಳೆಯನ ಬರ್ಬರ ಹತ್ಯೆ; ಮೊಬೈಲ್‌ನಲ್ಲಿ ಲೈವ್ ಮಾಡಿ ವಿಕೃತಿ!
 
ಅಪಘಾತದ ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ರಿಪ್ಪನ್‌ಪೇಟೆ  ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿ ಗಾಯಾಳುಗಳನ್ನು ಪೊಲೀಸ್ ಜೀಪ್ ನಲ್ಲಿಯೇ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

click me!