ಫೆಮಾ ಉಲ್ಲಂಘನೆ: ಮಂಗಳೂರಿನ ಉದ್ಯಮಿಯ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ

By Girish Goudar  |  First Published Jan 14, 2023, 9:03 AM IST

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘಿಸಿ ವಿದೇಶದಲ್ಲಿ ಕೋಟಿ ಮೌಲ್ಯದ ಆಸ್ತಿ ಮಾಡಲಾಗಿತ್ತು. ವಿದೇಶದ ಒಟ್ಟು ಆಸ್ತಿ ಭಾರತೀಯ ಲೆಕ್ಕಾಚಾರದ ಪ್ರಕಾರ 17.34 ಕೋಟಿ ರೂ. ಆಗಿದೆ. ಇದು ಫೆಮಾ ಕಾಯ್ದೆಯ ಸೆಕ್ಷನ್ 4ರ ಅನ್ವಯ ಕಾನೂನು ಉಲ್ಲಂಘನೆಯಾಗಿದೆ. 


ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ಮಂಗಳೂರು

ಮಂಗಳೂರು(ಜ.14): ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಹಿನ್ನೆಲೆಯಲ್ಲಿ ಮಂಗಳೂರಿನ ಉದ್ಯಮಿಯೊಬ್ಬರ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿ ಜಾರಿ ನಿರ್ದೇಶನಾಲಯ(ಇಡಿ) ಆದೇಶ ಹೊರಡಿಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಹಿನ್ನೆಲೆಯಲ್ಲಿ 17 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಮಂಗಳೂರಿನ ಮುಕ್ಕ ಗ್ರೂಪ್ ಆಫ್ ಕಂಪೆನೀಸ್‌ನ ಮೊಹಮ್ಮದ್ ಹ್ಯಾರಿಸ್ ಹೆಸರಿನಲ್ಲಿದ್ದ 17.34 ಕೋಟಿಯ ಸ್ಥಿರಾಸ್ತಿ ಜಪ್ತಿ ಮಾಡಲಾಗಿದೆ. 

Tap to resize

Latest Videos

ಆದಾಯ ತೆರಿಗೆ ಇಲಾಖೆಯ ಮಾಹಿತಿಯ ಆಧಾರದಲ್ಲಿ ಇಡಿ ಪ್ರಕರಣದ ತನಿಖೆ ನಡೆಸಿತ್ತು.‌ ತನಿಖೆಯ ಸಂದರ್ಭದಲ್ಲಿ, ಹ್ಯಾರಿಸ್ ಯುಎಇಯಲ್ಲಿ ಫ್ಲಾಟ್‌ ಹೊಂದಿರುವುದು. ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ವಿದೇಶಿ ವ್ಯಾಪಾರ ಘಟಕದಲ್ಲಿ ಹೂಡಿಕೆ ಮಾಡಿರುವುದು ಕಂಡು ಬಂದಿತ್ತು‌. 

ಕಡಲ ತಡಿಯಲ್ಲಿ ಗಾಂಜಾ ಘಾಟು: ಇದು ಮಂಗಳೂರು 'ಗಾಂಜಾ' ಕೇಸ್'ನ ಕಂಪ್ಲೀಟ್ ಕಹಾನಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘಿಸಿ ವಿದೇಶದಲ್ಲಿ ಕೋಟಿ ಮೌಲ್ಯದ ಆಸ್ತಿ ಮಾಡಲಾಗಿತ್ತು. ವಿದೇಶದ ಒಟ್ಟು ಆಸ್ತಿ ಭಾರತೀಯ ಲೆಕ್ಕಾಚಾರದ ಪ್ರಕಾರ 17.34 ಕೋಟಿ ರೂ. ಆಗಿದೆ. ಇದು ಫೆಮಾ ಕಾಯ್ದೆಯ ಸೆಕ್ಷನ್ 4ರ ಅನ್ವಯ ಕಾನೂನು ಉಲ್ಲಂಘನೆಯಾಗಿದೆ. 

ಕಾಯ್ದೆ ಪ್ರಕಾರ ವಿದೇಶದಲ್ಲಿ ಮಾಡಿದ ಆಸ್ತಿಯನ್ನು ಭಾರತದಲ್ಲಿ ವಶಪಡಿಸಿಕೊಳ್ಳಲು ಇಡಿಗೆ ಅಧಿಕಾರವಿದೆ. ಹೀಗಾಗಿ ಮಂಗಳೂರಿನ ಎರಡು ಫ್ಲ್ಯಾಟ್ ಗಳು ಮತ್ತು ಒಂದು ಕೈಗಾರಿಕಾ ನಿವೇಶನವನ್ನು ಜಪ್ತಿ ಮಾಡಲಾಗಿದೆ‌. 'ಫೆಮಾ’ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಇಡಿ ಪತ್ರಿಕಾ ಪ್ರಕಟಣೆ ನೀಡಿದೆ.

click me!