
ಬೀದರ್, [ಫೆ.23]: ಬಸವಕಲ್ಯಾಣ ನಗರದಲ್ಲಿ ಅಬಕಾರಿ ಮಹಿಳಾ ಪಿಎಸ್ಐ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರೇಖಾ ಕೋರಿ (29) ಆತ್ಮಹತ್ಯೆಗೆ ಶರಣಾದ ಪಿಎಸ್ಐ. ಕಳೆದ 8 ತಿಂಗಳಿಂದ ಬಸವಕಲ್ಯಾಣದಲ್ಲಿ ಪ್ರೊಬೆಷನರಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೇಖಾ ಅವರು ಇಂದು [ಭಾನುವಾರ] ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
1 ಕೊಲೆ, 2 ಆತ್ಮಹತ್ಯೆ: ವೈದ್ಯನ ಸೂಸೈಡ್ ಕೇಸ್‌ಗೆ ಬಿಗ್ ಟ್ವಿಸ್ಟ್!
ಇವರು ಮೂಲತಃ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದವರು ಎಂದು ತಿಳಿದುಬಂದಿದ್ದು, ಪತಿ ಹಾಗೂ ಕುಟುಂಬ ಸದಸ್ಯರೊಂದಿಗೆ ಬಸವಕಲ್ಯಾಣದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು.
ಮನೆಯಿಂದ ಪತಿ ಹೊರಗೆ ಹೋದ ಸಂದರ್ಭದಲ್ಲಿ ಫ್ಯಾನ್ಗೆ ನೇಣುಬಿಗಿದುಕೊಂಡಿದ್ದಾರೆ. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ. ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾರೆ. ಆದ್ರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ನು ಈ ಬಗ್ಗೆ ಬಸವಕಲ್ಯಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ