
ವರದಿ: ಮಹಾಂತೇಶ ಕುರಬೇಟ್, ಬೆಳಗಾವಿ
ಬೆಳಗಾವಿ (ಜೂ.30): ರಸ್ತೆ ಬದಿಯಲ್ಲಿ ಇದ್ದ ಎರಡಂತಸ್ತಿನ ಕಟ್ಟಡದ ಟೆರಸ್ ಮೇಲೆ ಗ್ಯಾಲರಿಗೆ ಹಗ್ಗ ಹಾಗೂ ಕೇಬಲ್ ಕಟ್ಟಿ ನೇಣು ಬಿಗಿದುಕೊಂಡು ವೃದ್ಧ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ (Belagavi Crime News) ನಡೆದಿದೆ. ಬೆಳಗಾವಿಯ ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ 65 ವರ್ಷದ ಶಿವಾಜಿ ಬಿರ್ಜೆ ಶಾಹುನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ನಿನ್ನೆ ತಡರಾತ್ರಿ ಎರಡಂತಸ್ತಿನ ಕಟ್ಟಡದ ಟೆರಸ್ ಮೇಲೆ ಹತ್ತಿ ಗ್ಯಾಲರಿಯಲ್ಲಿ ಹಗ್ಗ ಮತ್ತು ಕೇಬಲ್ ಕಟ್ಟಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ವಾಕಿಂಗ್‌ಗೆ ತೆರಳುತ್ತಿದ್ದ ಸ್ಥಳೀಯರು ಕಟ್ಟಡದ ಮೇಲೆ ಶವ ನೇತಾಡೋದನ್ನು ಕಂಡು ಬೆಚ್ಚಿ ಬಿದ್ದಿದ್ದರು.
ಸ್ಥಳೀಯರು ಎಪಿಎಂಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಧಳಕ್ಕೆ ತೆರಳಿದ ಪೊಲೀಸರು ಮೃತದೇಹ ಕೆಳಗಿಳಿಸಿ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ. ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ಕೆಲಸಕ್ಕೆ ಹೋಗಿರಲಿಲ್ವಂತೆ.
ಇದನ್ನೂ ಓದಿ: ಪತ್ನಿ ಕುಟುಂಬಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೂಪ: ಸಂಧಾನಕ್ಕೆ ಕರೆದು ರಾಕ್ಷಸ ನಡೆ!
ಶವಾಗಾರ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಪ್ರತಿಕ್ರಿಯಿಸಲು ಕುಟುಂಬಸ್ಥರು ನಿರಾಕರಿಸಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ