ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾ ಸಿಬ್ಬಂದಿಯೊಬ್ಬರ ಶವ ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ರಾಮನಗರ (ಫೆ.3): ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾ ಸಿಬ್ಬಂದಿಯೊಬ್ಬರ ಶವ ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ತಾಲೂಕು ಕಚೇರಿಯ ಚುನಾವಣಾ ಶಾಖೆ ಕೊಠಡಿಯಲ್ಲಿ ಶಿರಸ್ತೇದಾರ್ ಸುರೇಶ್(45) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾದ್ದರಿಂದ ಕನಕಪುರ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.
ಘಟನಾ ಸ್ಥಳಕ್ಕೆ ರಾಮನಗರ ಎಸ್ ಪಿ ಕಾರ್ತಿಕ್ ರೆಡ್ಡಿ ಹಾಗೂ ಕನಕಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಡೆತ್ ನೋಟ್ ಸಿಕ್ಕಿದ್ದು, ಅದನ್ನು ಕೂಡ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರು: 6ನೇ ಮಹಡಿಯಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ!