Employee Attempts Suicide: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ: 6 ತಿಂಗಳಿಂದ ಸಂಬಳ ನೀಡದ ಹಿನ್ನೆಲೆ ನೌಕರ ಕಚೇರಿಯಲ್ಲೇ ನೇಣಿಗೆ ಯತ್ನ

Kannadaprabha News   | Kannada Prabha
Published : Jun 27, 2025, 06:36 AM ISTUpdated : Jun 27, 2025, 10:44 AM IST
Mysuru news

ಸಾರಾಂಶ

ಮೈಸೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಆರು ತಿಂಗಳಿನಿಂದ ಸಂಬಳವಿಲ್ಲದೆ ನೌಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹೊರಗುತ್ತಿಗೆ ನೌಕರ ದೀಪಕ್ ಎಂಬವರು ಸಹಾಯಕ ನಿರ್ದೇಶಕರನ್ನು ಪ್ರಶ್ನಿಸಿದ ಬಳಿಕ ಈ ಘಟನೆ ನಡೆದಿದೆ.

ಮೈಸೂರು(ಜೂ.27): 6 ತಿಂಗಳಿಂದ ಸಂಬಳ ನೀಡದ ಹಿನ್ನೆಲೆ ಮನನೊಂದ ಹೊರ ಗುತ್ತಿಗೆ ನೌಕರ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿರುವ ಘಟನೆ ಮೈಸೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನಡೆದಿದೆ.

ಹೊರಗುತ್ತಿಗೆ ನೌಕರ ದೀಪಕ್‌ ಎಂಬವರೇ ಆತ್ಮಹತ್ಯೆಗೆ ಯತ್ನಿಸಿದವರು. ಕಳೆದ 6 ತಿಂಗಳಿಂದ ಸಂಬಳ ನೀಡದ ಕಾರಣ ಬೇಸರಗೊಂಡಿದ್ದ ದೀಪಕ್, ಕೆಲಸಕ್ಕೆ ಬಂದ ವೇಳೆ ಸಹಾಯಕ ನಿರ್ದೇಶಕರನ್ನು ಪ್ರಶ್ನೆ ಮಾಡಿದ್ದಾರೆ. ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಕಚೇರಿಯಲ್ಲೇ ಟವೆಲ್ ನಿಂದ ಫ್ಯಾನ್‌ ಗೆ ಬಿಗಿದುಕೊಳ್ಳಲು ಮುಂದಾದಾಗ ಸಹ ಸಿಬ್ಬಂದಿ ಅವರನ್ನು ತಡೆದು ವಾಪಸ್ ಕಳುಹಿಸಿದ್ದಾರೆ. ಇದೇ ವಿಚಾರಕ್ಕೆ ನಾಲ್ಕು ತಿಂಗಳ ಹಿಂದೆ ಸಹ ದೀಪಕ್ ಕೈ ಕುಯ್ದುಕೊಂಡಿದ್ದರು ಎಂದು ತಿಳಿದು ಬಂದಿದೆ.

ಆತ ಹೊರ ಗುತ್ತಿಗೆ ನೌಕರ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ. ಮನೆಯ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾನೆ. ನಮ್ಮಲ್ಲಿ ಒಟ್ಟು 16 ಜನ ಹೊರ ಗುತ್ತಿಗೆ ನೌಕರರಿದ್ದಾರೆ. ಎಲ್ಲರಿಗೂ ಏಜೆನ್ಸಿ ಮೂಲಕವೇ ಸಂಬಳ ಆಗುತ್ತದೆ. ಆದರೆ, ಈ ಘಟನೆಗೂ ನಮಗೂ ಸಂಬಂಧ ಇಲ್ಲ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!