* ಬಹುಕೋಟಿ ವಂಚನೆ ಪ್ರಕರಣ
* ಸ್ಯಾಂಡಲ್ ವುಡ್ ನಿರ್ಮಾಪಕ ಆನಂದ್ ಅಪ್ಪುಗೋಳ್ ಅರೆಸ್ಟ್
* ಸಹಕಾರಿ ಬ್ಯಾಂಕ್ ಹಣ ದುರುಪಯೋಗ ಮಾಡಿಕೊಂಡ ಆರೋಪ
ಬೆಂಗಳೂರು(ಜ. 06) ಬಹುಕೋಟಿ ವಂಚನೆ ಪ್ರಕರಣಕ್ಕೆ ((Fraud) ಸಂಬಂಧಿಸಿ ಸ್ಯಾಂಡಲ್ ವುಡ್ (Sandalwood) ನಿರ್ಮಾಪಕ ಆನಂದ್ ಅಪ್ಪುಗೋಳ್ (Anand Appugol) ಅವರನ್ನು ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಬಂಧಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಬಂಧನವಾಗಿದೆ. ಸುಮಾರು 250 ಕೋಟಿ ರೂಪಾಯಿ ವಂಚನೆ ಆರೋಪ ಅಪ್ಪುಗೋಳ್ ಮೇಲಿದೆ. ಪಿಎಂಎಲ್ಎ ಕಾಯಿದೆ ಅಡಿ ದೂರು ದಾಖಲಿಸಿಕೊಳ್ಳಲಾಗಿತ್ತು.
undefined
ಜಾರ್ಜ್ ಶೀಟ್ ಸಲ್ಲಿಸಿದ್ದರು: ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ಮಾಲೀಕತ್ವದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬಹುಕೋಟಿ ಠೇವಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಬೆಳಗಾವಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದರು.
Cybercrime : Omicron ಫ್ರೀ ಟೆಸ್ಟ್ ಹೆಸರಲ್ಲಿ ವಂಚಕರು ಬಲೆ ಬೀಸ್ತಾರೆ.. ಸರ್ಕಾರದ ಎಚ್ಚರಿಕೆ
ಸಿಐಡಿ ಡಿವೈಎಸ್‌ಪಿ ಪುರುಷೋತ್ತಮ ನೇತೃತ್ವದ ತಂಡ ಪ್ರಕರಣದ ತನಿಖೆ ನಡೆಸಿ ಎರಡು ದಿನಗಳ ಹಿಂದೆ ಬರೋಬ್ಬರಿ 2063 ಪುಟಗಳ ಚಾರ್ಜ್‌ಶೀಟ್ ಅನ್ನು ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಪ್ರಕರಣದಲ್ಲಿಒಟ್ಟು 13 ಜನರು 275 ಕೋಟಿ ರೂ. ಠೇವಣಿ ಹಣ ವಂಚನೆ ಮಾಡಿದ್ದಾರೆ ಎಂಬ ಮಾತು ಕೇಳಿ ಬಂದಿದ್ದರಿಂದ ಜಾರಿ ನಿರ್ದೇಶನಾಲಯದ ವ್ಯಾಪ್ತಿಗೆ ಒಳಪಟ್ಟಿತ್ತು.
ಸಂಗೊಳ್ಳಿ ರಾಯಣ್ಣ ಸೊಸೈಟಿಯು ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ 35 ಶಾಖೆಗಳನ್ನು ಹೊಂದ್ದಿದ್ದು, 26 ಸಾವಿರ ಜನರಿಂದ ಠೇವಣಿ ಸಂಗ್ರಹಿಸಿತ್ತು. ಆನಂದ ಅಪ್ಪುಗೋಳ ಸೇರಿ ಸೊಸೈಟಿಯ 13 ನಿರ್ದೇಶಕರು ಠೇವಣಿ ಹಣವನ್ನು ಸ್ವಂತಕ್ಕೆ ಬಳಸಿಕೊಂಡು ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನುವುದು ಪ್ರಮುಖ ಆರೋಪ.
ಈ ಹಿಂದೆಯೂ ಬಂಧನವಾಗಿತ್ತು: ಮುಂಬೈನಲ್ಲಿ ಅಪ್ಪೊಗೋಳ್ ಅವರನ್ನು 2018 ರಲ್ಲಿ ಬಂಧಿಸಲಾಗಿತ್ತು. ಅಪ್ಪುಗೋಳ್ ವಿರುದ್ಧ ಠೇವಣಿದಾರರಿಗೆ ನಂಬಿಕೆ ದ್ರೋಹ, ಮೋಸ, ವಂಚನೆ, ಠೇವಣಿದಾರರಿಗೆ ನಂಬಿಕೆ ದ್ರೋಹ, ಸಾರ್ವಜನಿಕರ ಠೇವಣಿ ಹಣವನ್ನ ಸಕಾಲಕ್ಕೆ ಪಾವತಿಲ್ಲ, ನಿಯಮವನ್ನು ಗಾಳಿಗೆ ತೂರಿ ಠೇವಣಿ ಹಣವನ್ನು ಬೇಕಾಬಿಟ್ಟಿ ವಿನಿಯೋಗ ಹಾಗೂ ಬ್ಯಾಂಕ್ ಕಚೇರಿಗೆ ಬೀಗ ಹಾಕಿ ಠೇವಣಿದಾರರಿಗೆ ಮೋಸ ಮಾಡಲಾಗಿದೆ ಎಂದು ಪ್ರಕರಣ ದಾಖಲಿಸಲಾಗಿತ್ತು.