ಕಾಲೇಜಿನ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬೀಡಗಾನಹಳ್ಳಿ ಬಳಿಯ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ (ಜು.05): ಕಾಲೇಜಿನ ಹಾಸ್ಟೆಲ್ ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬೀಡಗಾನಹಳ್ಳಿ ಬಳಿಯ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದ ಪ್ರೀತಿ (21) ಸಾವನ್ನಪ್ಪಿರುವ ದ್ವಿತೀಯ ವರ್ಷದ ಇಂನೀಯರಿಂಗ್ ವಿದ್ಯಾರ್ಥಿನಿ. ಮಂಗಳವಾರ ಕಾಲೇಜಿನ ವಸತಿನಿಲಯದ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪ್ರೀತಿ ಕಂಡು ಬಂದ ಕೂಡಲೇ ಕಾಲೇಜು ಆಡಳಿತ ಮಂಡಳಿ ಸಿಬ್ಬಂದಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆದಾಗಲೇ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಸಿದ್ದಾರೆ.
ಮೃತ ದೇಹವನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕಾಲೇಜು ಆಡಳಿತ ಮಂಡಳಿಯವರು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಕಾರಣ ತಿಳಿದುಬಂದಿಲ್ಲ ಎನ್ನುತ್ತಿದ್ದರೆ. ಇತ್ತ ಮೃತಳ ಪೋಷಕರು ಸಹ ಏನಾಗಿದೆ ಎಂಬುದು ನಮಗೂ ಗೊತ್ತಿಲ್ಲ ಕಾಲೇಜಿನವರು ನಿಮ್ಮ ಮಗಳಿಗೆ ತುಂಬಾ ಹುಷಾರಿಲ್ಲ ಬೇಗ ಬನ್ನಿ ಅಂತ ಹೇಳಿದ್ರು. ನಾವು ಬಂದ ಮೇಲೆ ಮೃತಪಟ್ಟಿದ್ದಾಳೆ ಎನ್ನುತ್ತಿದ್ದಾರೆ ಅಂತ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆಗೆ ಮೃತಳ ತಂದೆ ತಮ್ಮ ಮಗಳ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದಾರೆ.
ಅಧಿವೇಶನ ಬಳಿಕ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ: ಬಿಎಸ್‌ವೈ
ಸಾರಿಗೆ ನೌಕರನ ಆತ್ಮಹತ್ಯೆ, ತನಿಖೆಗೆ ಆದೇಶ: ರಾಣಿಬೆನ್ನೂರು ಸಾರಿಗೆ ಸಂಸ್ಥೆ ಬಸ್ ಡಿಪೋ ಆವರಣದಲ್ಲಿ ನೌಕರನ ಆತ್ಮಹತ್ಯೆ ಘಟನೆಗೆ ಸಂಬಂಧಿಸಿದಂತೆ ಇಲಾಖಾ ತನಿಖೆಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಅದೇಶಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾವೇರಿ ವಿಭಾಗದ ರಾಣಿಬೆನ್ನೂರು ಬಸ್ ಡಿಪೋ ಆವರಣದಲ್ಲಿ ಚಾಲಕ ಕಂ ನಿರ್ವಾಹಕ ಮಲ್ಲಿಕಾರ್ಜುನ ಎಸ್. ಬಡಿಗೇರ(48) ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಳಗಿನ ಜಾವ ಸಂಭವಿಸಿದೆ. ಮೂಲತಃ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ ಅವರು ಹತ್ತು ವರ್ಷಗಳಿಂದ ರಾಣಿಬೆನ್ನೂರು ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸ್ಪೀಡ್ ಲಿಮಿಟ್: ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್
ಜೂ. 25 ರಂದು ಕರ್ತವ್ಯ ಮುಗಿಸಿಕೊಂಡು ಹೋಗಿದ್ದಾರೆ. ಜು. 2 ರಂದು ಡಿಪೋ ಮೇಲಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಜು. 3 ರಂದು ಕರ್ತವ್ಯಕ್ಕೆ ಬರುವುದಾಗಿ ತಿಳಿಸಿದ್ದರು. ಜು. 3 ರಂದು ಬೆಳಗ್ಗೆ 3.15ರ ಸಮಯದಲ್ಲಿ ಡಿಫೋಗೆ ಬಂದಿದ್ದು, ನಂತರ ಡಿಪೋ ಆವರಣದಲ್ಲಿನ ಬೇವಿನಮರಕ್ಕೆ ನೇಣು ಹಾಕಿಕೊಂಡಿರುವುದಾಗಿ ತಿಳಿದು ಬಂದಿದೆ. ಮಾಹಿತಿ ತಿಳಿದ ಕೂಡಲೆ ಹಾವೇರಿ ವಿಭಾಗೀಯ ಕಚೇರಿ ಹಾಗೂ ಹುಬ್ಬಳ್ಳಿ ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ತ್ವರಿತವಾಗಿ ವರದಿ ಸಲ್ಲಿಸುವಂತೆ ಹಿರಿಯ ಮೇಲಧಿಕಾರಿಗಳಿಗೆ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಆದೇಶಿಸಿದ್ದಾರೆ.