
ಬೆಂಗಳೂರು, (ಅ.13): ಚಾರ್ಜಿಂಗ್ ಹಾಕಿದ್ದ ಇವಿ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಸುಟ್ಟು ಕರಕಲಾದ ಭಯಾನಕ ಘಟನೆ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ
ಇವಿ ಬೈಕ್ ಸ್ಫೋಟಗೊಂಡಿದ್ದು ಹೇಗೆ?
ಮುಕೇಶ್ ಎಂಬುವವರಿಗೆ ಸೇರಿದ ಈ ಇವಿ ಬೈಕ್, ಮನೆಯ ಬೇಸ್‌ಮೆಂಟ್‌ನಲ್ಲಿ ಚಾರ್ಜಿಂಗ್‌ನಲ್ಲಿತ್ತು. ರಾತ್ರಿ 11 ಗಂಟೆ ಸುಮಾರಿಗೆ ಚಾರ್ಜಿಂಗ್‌ನಲ್ಲಿದ್ದ ಎಲೆಕ್ಟ್ರಿಕ್ ಬೈಕ್ ಒಂದು ಇದ್ದಕ್ಕಿದ್ದಂತೆ ಸ್ಪೋಟಗೊಂಡು ಬೆಂಕಿಗಾಹುತಿಯಾಗಿದೆ. ಸ್ಪೋಟದಿಂದಾಗಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಕ್ಕದಲ್ಲಿದ್ದ ಸೈಕಲ್ ಕೂಡ ಬೆಂಕಿಗೆ ಆಹುತಿಯಾಗಿದೆ.
ಇದನ್ನೂ ಓದಿ: Dharwadaದಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ
ಬೆಂಕಿ ಮನೆಗೆ ಆವರಿಸುವ ಮುನ್ನ ಸ್ಥಳೀಯರು ಬೈಕ್ ಅನ್ನು ಹೊರಗೆ ಎಳೆದು ಹಾಕಿದ್ದಾರೆ. ಇದರಿಂದಾಗಿ ಮನೆಗೆ ಹೊತ್ತಿಕೊಳ್ಳುವುದು ತಪ್ಪಿದೆ. ಸುದ್ದಿ ತಿಳಿದ ಕೂಡಲೇ ರಾಜಾಜಿನಗರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ