ಮಾನ್ವಿ: ಕಾಣೆಯಾಗಿದ್ದ ಮಾಜಿ ಶಾಸಕ ನಾಯಕರ ಮೊಮ್ಮಕ್ಕಳು ಶವವಾಗಿ ಪತ್ತೆ

Suvarna News   | Asianet News
Published : Mar 08, 2021, 11:36 AM IST
ಮಾನ್ವಿ: ಕಾಣೆಯಾಗಿದ್ದ ಮಾಜಿ ಶಾಸಕ ನಾಯಕರ ಮೊಮ್ಮಕ್ಕಳು ಶವವಾಗಿ ಪತ್ತೆ

ಸಾರಾಂಶ

ನಾಪತ್ತೆಯಾಗಿದ್ದ ಬಾಲಕರು ಹಳ್ಳದಲ್ಲಿ ‌ಶವವಾಗಿ ಪತ್ತೆ| ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದ ಹಳ್ಳದಲ್ಲಿ ಮೃತದೇಹ ಪತ್ತೆ| ಆಟವಾಡಲು ಹೋದಾಗ ನಾಪತ್ತೆಯಾಗಿದ್ದ ಬಾಲಕರು| 

ರಾಯಚೂರು(ಮಾ.08): ನಿನ್ನೆ(ಭಾನುವಾರ) ನಾಪತ್ತೆಯಾಗಿದ್ದ  ಜಿಲ್ಲೆಯ ಮಾನ್ವಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಇಬ್ಬರು ಮೊಮ್ಮಕ್ಕಳು ಇಂದು(ಸೋಮವಾರ) ಶವವಾಗಿ ಪತ್ತೆಯಾಗಿದ್ದಾರೆ.

ಜಿಲ್ಲೆಯ ಸಿರವಾರ ತಾಲೂಕಿನ ಬಲ್ಲಟಗಿ ಗ್ರಾಮದ ಹಳ್ಳದಲ್ಲಿ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ವರುಣ್(9) ಹಾಗೂ ಸಣ್ಣಯ್ಯ(5) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ನಿನ್ನೆ ಮಧ್ಯಾಹ್ನ ಆಟವಾಡಲು ಹೋದಾಗ ಬಾಲಕರು ನಾಪತ್ತೆಯಾಗಿದ್ದರು.

ಹಟ್ಟಿ ಚಿನ್ನದ ಗಣಿ ಕಾರ್ಮಿಕರಿಂದ ಸಚಿವ ಮುರುಗೇಶ್ ನಿರಾಣಿಗೆ ಘೇರಾವ್

ಬಾಲಕನಿಗಾಗಿ ನಿನ್ನೆಯಿಂದ ಸಿರವಾರ ಹಾಗೂ ಕವಿತಾಳ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ, ಇಂದು ಬಾಲಕರು ಶವವಾಗಿ ಪತ್ತೆಯಾಗಿದ್ದಾರೆ. ಬಾಲಕರು ಶವವಾಗಿ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಸಂಬಂಧ ಸಿರವಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!