ವಿಚಾರಣೆಗೆ ರಮೇಶ್‌ ಜಾರಕಿಹೊಳಿ ಬರುತ್ತಿಲ್ಲ : ಮುಂದಿನ ಕ್ರಮ

By Kannadaprabha NewsFirst Published Apr 21, 2021, 11:06 AM IST
Highlights

ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಪದೇ ಪದೇ ಗೈರಾಗುತ್ತಿದ್ದು, ಒಟ್ಟು ನಾಲ್ಕು ಬಾರಿ ವಿಚಾರಣೆ ತಪ್ಪಿಸಿಕೊಂಡಿದ್ದಾರೆ.  ಇದರಿಂದ ಮುಂದಿನ ಕ್ರಮ ಜರುಗಿಸುವ ಸಾಧ್ಯತೆ ಇದೆ. 

 ಬೆಂಗಳೂರು (ಏ.21):  ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ವಿಶೇಷ ತನಿಖಾ ದಳದ (ಎಸ್‌ಐಟಿ) ವಿಚಾರಣೆಗೆ ಸತತ ನಾಲ್ಕನೇ ಬಾರಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಗೈರು ಹಾಜರಾಗಿದ್ದಾರೆ.

ಕೊರೋನಾ ಸೋಂಕು ಪೀಡಿತರಾಗಿ ಹೋಂ ಐಸೋಲೇಷನ್‌ ಆಗಿರುವ ಕಾರಣಕ್ಕೆ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಚಿಕಿತ್ಸೆ ಮುಗಿದ ಬಳಿಕ ವಿಚಾರಣೆಗೆ ಬರುತ್ತೇನೆ ಎಂದು ತನಿಖಾಧಿಕಾರಿಗಳಿಗೆ ಮಾಜಿ ಸಚಿವರು ಮಂಗಳವಾರ ತಿಳಿಸಿ ಕಾಲಾವಕಾಶ ಕೋರಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಮತ್ತೆ ಮಾಜಿ ಸಚಿವರಿಗೆ ಎಸ್‌ಐಟಿ ನೋಟಿಸ್‌ ನೀಡಲಿದೆ ಎನ್ನಲಾಗಿದೆ.

 ಈ ಪ್ರಕರಣದಲ್ಲಿ ನಾಲ್ಕನೇ ಬಾರಿಗೆ ರಮೇಶ್‌ ಜಾರಕಿಹೊಳಿ ವಿಚಾರಣೆಗೆ ಗೈರಾದ ಈ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಹಾಗೂ ಹಿರಿಯ ಅಧಿಕಾರಿಗಳ ಸಲಹೆ ಪಡೆದು ಮುಂದಿನ ಕ್ರಮ ಜರುಗಿಸಲು ತನಿಖಾಧಿಕಾರಿ ಮುಂದಾಗಿದ್ದಾರೆ ಎಂದು ಮೂಲಗಳು ಹೇಳಿವೆ.

ಮಾಜಿ ಸಚಿವ ರಮೇಶ್‌ ಜಾರಕಿಹೊಳಿಗೆ ರಿಲೀಫ್ ...

ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ್ದಾರೆ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿರುದ್ಧ ಯುವತಿ ಆರೋಪಿಸಿದ್ದರು. ನ್ಯಾಯಾಲಯದಲ್ಲಿ ಸಹ ಸಿಆರ್‌ಪಿಸಿ ಸೆಕ್ಷನ್‌ 164ರಡಿ ಅದೇ ಆರೋಪವನ್ನು ಹೊರಿಸಿ ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಳು. ಇದಾದ ಬಳಿಕ ಮಾಜಿ ಸಚಿವರನ್ನು ವಿಚಾರಣೆ ನಡೆಸಿದ ಎಸ್‌ಐಟಿ ಅಧಿಕಾರಿಗಳು, ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಮೊದಲೆರೆಡು ಬಾರಿ ಅನಾರೋಗ್ಯದ ಕಾರಣ ನೀಡಿ ಗೈರಾಗಿದ್ದ ಅವರು, ಕೊರೋನಾ ಸೋಂಕಿತರಾಗಿ ಆಸ್ಪತ್ರೆಗೆ ಸೇರಿದರು. ಈಗ ಕೊರೋನಾ ಚಿಕಿತ್ಸೆ ಬಳಿಕ ವಿಚಾರಣೆಗೆ ಬರುವುದಾಗಿ ಜಾರಕಿಹೊಳಿ ತಿಳಿಸಿದ್ದಾರೆ ಎನ್ನಲಾಗಿದೆ.

click me!