
"
ಬೆಂಗಳೂರು(ಸೆ.18): ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿಸಿಬಿ ವಿಚಾರಣೆಯಲ್ಲಿ ನಟಿ ಸಂಜನಾ ಹಲವು ಮಾಹಿತಿ ಬಹಿರಂಗ ಪಡಿಸಿದ್ದಾರೆ. ಇದೀಗ ಸುವರ್ಣನ್ಯೂಸ್ ದಾಖಲೆ ಸಮೇತ ಸಂಜನಾ ಗಲ್ರಾಣಿ ಅಸತಿ ಕತೆ ಬಹಿರಂಗ ಪಡಿಸಿದೆ. 2 ವರ್ಷಗಳ ಹಿಂದೆ ಸಂಜನಾ ಗಲ್ರಾಣಿ ಇಸ್ಲಾಂಗೆ ಮತಾಂತರಗೊಂಡಿದ್ದಾರೆ.
"
ಅರ್ಚನಾ ಮನೋಹರ್ ಗಲ್ರಾಣಿ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿಕೊಡುವಾಗ ಸಂಜನಾ ಗಲ್ರಾಣಿಯಾಗಿ ಹೆಸರು ಬದಲಾಯಿಸಿಕೊಂಡಿದ್ದಾರೆ. ಸಂಜನಾ, ವೈದ್ಯ ಅಝೀಝ್ ಪಾಶಾ ಮದುವೆಯಾಗಿರುವ ವಿಚಾರ ಇತ್ತೀಚೆಗೆ ಬಹಿರಂಗೊಂಡಿತ್ತು. ಸಂಜನಾಳ ಈ ಪ್ರೀತಿ ಹಾಗೂ ಮದುವೆ ಇಷ್ಟಕ್ಕೆ ನಿಲ್ಲಲಿಲ್ಲ. 2018ರಲ್ಲಿ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿರುವ ದಾರುಲ್ ಉಲೂಮ್ ಶಾಹ್ ವಲ್ಲಿಉಲ್ಲಾ ಮಸೀದಿಯಲ್ಲಿ ಸಂಜನಾ ಇಸ್ಲಾಂಗೆ ಮತಾಂತರಗೊಂಡಿದ್ದಾರೆ.
"
ಅಕ್ಟೋಬರ್ 09 , 2018ರಂದು ದಾರುಲ್ ಉಲೂಮ್ ಶಾಹ್ ವಲ್ಲಿಉಲ್ಲಾ ಮಸೀದಿ ನೀಡಿರುವ ರಿಜಿಸ್ಟ್ರೇಶನ್ ದಾಖಲೆಯನ್ನು ಸುವರ್ಣನ್ಯೂಸ್ ಬಹಿರಂಗ ಪಡಿಸಿದೆ. ಈ ದಾಖಲೆಯಲ್ಲಿ ಅಕ್ಟೋಬರ್ 9, 2018ರಿಂದ ಸಂಜನಾ ಗಲ್ರಾಣಿ ಮಾಹೀರಾ ಆಗಿ ಬದಲಾಗಿದ್ದಾರೆ. ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಳ್ಳಲು ಯಾರು ಒತ್ತಡ ಹಾಕಿಲ್ಲ, ಸ್ವಯಂ ಇಚ್ಚೆಯಿಂದ ಇಸ್ಲಾಂಗೆ ಮತಾಂತರವಾಗಿರುವುದಾಗಿ ದಾಖಲೆಯಲ್ಲಿ ಹೇಳಿದೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ