ಶೀಲ ಶಂಕಿಸುವ ಗಂಡ, ಕೌಂಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ದುರಂತ ಅಂತ್ಯ!

Published : Apr 18, 2025, 07:59 AM ISTUpdated : Apr 18, 2025, 09:02 AM IST
ಶೀಲ ಶಂಕಿಸುವ ಗಂಡ, ಕೌಂಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿ ದುರಂತ ಅಂತ್ಯ!

ಸಾರಾಂಶ

ಕೌಟುಂಬಿಕ ಕಲಹ , ಕಿರುಕುಳ ತಾಳಲಾರದೇ ಮನನೊಂದ ಪತ್ನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.

ಬೇಲೂರು (ಏ.18): ಕೌಟುಂಬಿಕ ಕಲಹ , ಕಿರುಕುಳ ತಾಳಲಾರದೇ ಮನನೊಂದ ಪತ್ನಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.

ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಲಿಂಗಾಪುರ ಗ್ರಾಮದ ಶೇಖರ್ ಎಂಬುವವರು ಕಳೆದ 16 ವರ್ಷಗಳ ಹಿಂದೆ ಸಕಲೇಶಪುರ ತಾಲೂಕಿನ ಮಾಗಲು ಗ್ರಾಮದ ಹರಿಣಾಕ್ಷಿ ಎಂಬುವವರನ್ನು ವಿವಾಹವಾಗಿದ್ದರು. ತಂದೆ ಗುರುವಪ್ಪ ಮಾತನಾಡಿ, ಈ ನಡುವೆ ಇಬ್ಬರ ನಡುವೆ ಸಣ್ಣ ಪುಟ್ಟ ವಿಷಯಕ್ಕೆ ಮನಸ್ತಾಪ, ಜಗಳ ನಡೆಯುತ್ತಿತ್ತು. ಜಗಳ ನಡೆಯುತ್ತಿದ್ದ ಸಂದರ್ಭದಲ್ಲೆಲ್ಲ ನಾವುಗಳು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ರಾಜಿ ಮಾಡಿ ಸಂಧಾನ ಮಾಡುತ್ತಿದ್ದೆವು, ಆದರೆ ಇತ್ತೀಚೆಗೆ ನನ್ನ ಮಗಳ ಮೇಲೆ ಅನೈತಿಕ ಸಂಬಂಧದ ಸಂಶಯ ಪಟ್ಟು ನಾನು ಬೇರೆ ವಿವಾಹವಾಗುತ್ತೇನೆ ನೀನು ಸಹ ಬೇರೆ ಆಗು ಎಂದು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತ ವಿಚ್ಛೇದನ ಕೊಡುವಂತೆ ಪೀಡಿಸುತ್ತಿದ್ದ.

ಇದನ್ನೂ ಓದಿ: ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ಮೇಸ್ತ್ರಿ ಆಗಿದ್ದ ದಂಪತಿ ಮೃತದೇಹಗಳು ಪತ್ತೆ

ಇತ್ತೀಚೆಗೆ ಅವನು ಪರಸ್ತ್ರೀ ಯೊಂದಿಗೆ ಸ್ನೇಹ ಸಂಬಂಧ ಬೆಳೆಸಿರಬಹುದೆಂದು ಸ್ಥಳೀಯ ಹಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ನನ್ನ ಮಗಳು ಆಗಿಂದಾಗ್ಗೆ ತನ್ನ ನೋವನ್ನು ಹೇಳಿಕೊಂಡಿದ್ದಳು. ಅದರಂತೆ ಕೆಲ ದಿನಗಳ ಹಿಂದಷ್ಟೇ ಕುಟುಂಬಸ್ಥರ ಸಮ್ಮುಖದಲ್ಲಿ ಇಬ್ಬರಿಗೂ ತಿಳಿ ಹೇಳಿದ್ದೆವು. ಆ ಬಳಿಕ ದಂಪತಿಗಳಿಬ್ಬರೂ ಕೆಲ ದಿನಗಳ ಸಮಯಾವಕಾಶ ನೀಡಿ ಸರಿಪಡಿಸಿಕೊಳ್ಳುತ್ತೇವೆ ಎಂದಿದ್ದರು. ಆದರೆ ಇದೀಗ ಅವನ ಚಿತ್ರಹಿಂಸೆಗೆ ನನ್ನ ಮಗಳ ದಾರುಣ ಸಾವು ಸಂಭವಿಸಿದೆ ಎಂದು ಆರೋಪಿಸಿದ್ದಾರೆ.

ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಮಹಿಳೆಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!
ದಂಪತಿ, ಪಾಲಿಕೆ ಅಧಿಕಾರಿಗಳ ಕಿರುಕುಳಕ್ಕೆ ಟೆಕ್ಕಿ ದುರಂತ ಸಾವು, ಡೆಟ್‌ನೋಟ್‌ನಲ್ಲಿ ಶಾಕಿಂಗ್ ಮಾಹಿತಿ!