Latest Videos

ಕೌಟುಂಬಿಕ ಕಲಹಕ್ಕೆ ಬೇಸತ್ತು ಪತ್ನಿಯನ್ನ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ!

By Ravi JanekalFirst Published Jun 17, 2024, 10:21 PM IST
Highlights

ಕೌಟುಂಬಿಕ ಕಲಹಕ್ಕೆ ಬೇಸತ್ತು ತನ್ನ ಪತ್ನಿಯನ್ನೇ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ  ಬೇಲೂರು ತಾಲ್ಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ.

ಹಾಸನ (ಜೂ.17): ಕೌಟುಂಬಿಕ ಕಲಹಕ್ಕೆ ಬೇಸತ್ತು ತನ್ನ ಪತ್ನಿಯನ್ನೇ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ  ಬೇಲೂರು ತಾಲ್ಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ.

ಜಾಜಿ (45), ಪತಿಯಿಂದ ಕೊಲೆಯಾದ ಪತ್ನಿ. ಪತ್ನಿ ಕೊಂದ ಬಳಿಕ ನೇಣಿಗೆ ಶರಣಾದ ಪತಿ ಹರೀಶ್ ದಂಪತಿ ಮೂವರು ಮಕ್ಕಳಿದ್ದು ಬೇರೆಡೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎನ್ನಲಾಗಿದೆ. 

ಪ್ರತಿನಿತ್ಯ ಕ್ಷುಲ್ಲಕ ಕಾರಣಕ್ಕೆ ಜಗಳವಾಡುತ್ತಿದ್ದ ಪತಿ-ಪತ್ನಿ. ಇದರಿಂದ ಬೇಸತ್ತಿದ್ದ ಪತಿ. ಇಂದು ಸಹ ಪತಿ-ಪತ್ನಿ ಜಗಳ ಮಾಡಿಕೊಂಡಿದ್ದಾರೆ. ಪರಸ್ಪರ ಬೈದಾಡಿಕೊಂಡಿದ್ದಾರೆ. ವಾಗ್ವಾದ ವಿಕೋಪಕ್ಕೆ ತಿರುಗಿ ಮನೆಯಲ್ಲಿದ್ದ ನಾಡಬಂದೂಕಿನಿಂದ ಗುಂಡು ಹಾರಿಸಿ ಪತ್ನಿಯನ್ನ ಕೊಲೆ ಮಾಡಿರುವ ಆರೋಪಿ. ಬಳಿಕ ತಾನೂ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಫೋಟೊಶೂಟ್, ರೀಲ್ಸ್‌ ಹುಚ್ಚಿಗೆ ಹೊಂಡದಲ್ಲಿ ಬಿದ್ದು ಪ್ರಾಣ ಕಳೆದುಕೊಂಡ ಬಾಲಕರು!

ಘಟನೆ ಬಳಿಕ ಸ್ಥಳಕ್ಕೆ ಅರೇಹಳ್ಳಿ ಪೊಲೀಸರು ಆಗಮಿಸಿದ್ದು, ಸ್ಥಳ ಪರಿಶೀಲನೆ ಮಾಡಿದ್ದಾರೆ.
 

click me!