ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ ಹಾಗೂ ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ವಿರುಪಸಂದ್ರ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಬೆಳಗಿನ ಜಾವದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಚಿಕ್ಕಬಳ್ಳಾಪುರ (ಸೆ.23)- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ ಹಾಗೂ ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ವಿರುಪಸಂದ್ರ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಬೆಳಗಿನ ಜಾವದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಸುಧಾಮಣಿ(32) ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯಾಗಿದ್ದು, ಸಾನ್ವಿ(3) ವರ್ಷ ಮಗಳು ಸಾವನ್ನಪ್ಪಿದ್ದು, ಹೆತ್ತ ತಾಯಿಯೇ ಮಗಳ ಕುತ್ತಿಗೆ ಹಿಸುಕಿ ಕೊಲೆ ಮಾಡಿ ಬಳಿಕ ತಾಯಿ ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಮನೆ ಕೆಲಸ ಬಿಟ್ಟು ಮಹಿಳಾ ಸಂಘಟನೆಯಲ್ಲಿ ಬ್ಯುಸಿ; ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳದ್ದಕ್ಕೆ ಪತ್ನಿ, ಅತ್ತೆಯನ್ನ ಕೊಂದ ಪತಿ!
ಸುಧಾಮಣಿ ಮತ್ತು ರವಿ ದಂಪತಿಗಳು ಅಗಾಗ ಕೌಟುಂಬಿಕ ವಿಚಾರವಾಗಿ ಜಗಳ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದ್ದು, ಗುರುವಾರ ಸಂಜೆ ಮನೆಯಿಂದ ಹೊರಗಡೆ ಹೋದ ರವಿ ರಾತ್ರಿ ಮನೆಗೆ ಬಂದನೋ ಇಲ್ಲವೂ ಗೊತ್ತಿಲ್ಲ, ಬೆಳಗಿನ ಜಾವದಲ್ಲಿ ಮಗು ಸಾವನ್ನಪ್ಪಿದ್ದು, ತಾಯಿ ಗ್ರಾಮದ ಹೊರವಲಯದ ಬಾವಿಯಲ್ಲಿ ಬಿದ್ದು ಆತ್ಮಹತ್ಯೆಗೆ ಶರಣಾಗಿರುವುದು ಪತ್ತೆಯಾಗಿದೆ.
ಮೃತಳ ಗಂಡ ರವಿ ಪರಾರಿಯಾಗಿದ್ದಾನೆ, ರವಿ ಸಿಕ್ಕ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್, ವೃತ್ತನಿರೀಕ್ಷಕ ಕೆ.ಪಿ.ಸತ್ಯನಾರಾಯಣ್, ಎಸ್ಸೈ ಭಾಸ್ಕರ್ ಮತ್ತು ಸಿಬ್ಬಂದ್ದಿ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರಲ್ಲಿ ನೇಪಾಳದ ಕುಟುಂಬ ದುರಂತ ಅಂತ್ಯ: ರಾತ್ರಿ ಊಟ ಮಾಡಿ ಮಲಗಿದವರು ಮೇಲೇಳಲಿಲ್ಲ
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ರವಿಯನ್ನು ಹುಡುಕುತ್ತಿದ್ದಾರೆ.