ಕರಾವಳಿಯ ಪ್ರಖ್ಯಾತ ಯಕ್ಷಗಾನ ಭಾಗವತರೊಬ್ಬರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮುಳೂರು ಎಂಬಲ್ಲಿ ನಡೆದಿದೆ. ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆ ಮಾಡಿಕೊಂಡ ಕಲಾವಿದ.
ಮಂಗಳೂರು (ನ.18): ಕರಾವಳಿಯ ಪ್ರಖ್ಯಾತ ಯಕ್ಷಗಾನ ಭಾಗವತರೊಬ್ಬರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮುಳೂರು ಎಂಬಲ್ಲಿ ನಡೆದಿದೆ. ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆ ಮಾಡಿಕೊಂಡ ಕಲಾವಿದ. ಮೂಳೂರು ಬಳಿಯ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಬಪ್ಪನಾಡು ಹಾಗೂ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೊರೊನ ಸಂದರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು. ಕೌಟುಂಬಿಕ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರಾಗಿದ್ದರು. ತೆಂಕುತಿಟ್ಟಿನ ಭಾಗವತಿಕೆಯಲ್ಲಿ ತನ್ನದೇ ಛಾಪನ್ನು ಮೂಡಿಸಿ ಹೆಸರು ಮಾಡುತ್ತಿದ್ದ ಯುವ ಭಾಗವತರಾದ ಕೀರ್ತನ್ ಶೆಟ್ಟಿ ವಗೆನಾಡು. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
21ರಿಂದ ಮಂಗ್ಳೂರಲ್ಲಿ ಯಕ್ಷಗಾನ ತಾಳಮದ್ದಳೆ ಸಪ್ತಾಹ-2022
ಮಂಗಳೂರು: ಯಕ್ಷಾಂಗಣ ಮಂಗಳೂರು ಇದರ ಯಕ್ಷಗಾನ ಚಿಂತನ- ಮಂಥನ ಮತ್ತು ಪ್ರದರ್ಶನ ವೇದಿಕೆಯಿಂದ ಮಂಗಳೂರು ವಿಶ್ವ ವಿದ್ಯಾಲಯ ಡಾ. ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷಭಾರತಿ ಪುತ್ತೂರು ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮದ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ 10ನೇ ವರ್ಷದ ನುಡಿಹಬ್ಬ ನ. 21ರಿಂದ 27ರ ವರೆಗೆ ಪ್ರತಿದಿನ ಸಂಜೆ 4.30ರಿಂದ ನಗರದ ಹಂಪನಕಟ್ಟೆವಿವಿ ಕಾಲೇಜು ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.
ದಶಮಾನ ಸಡಗರ ಸಪ್ತಾಹವನ್ನು ನ. 21 ರಂದು ಸಂಜೆ 4ಕ್ಕೆ ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸುವರು. ಮುಂಬೈನ ಉದ್ಯಮಿ ಸದಾಶಿವ ಶೆಟ್ಟಿಕುಳೂರು ಕನ್ಯಾನ ಯಕ್ಷಾಂಗಣದ ದಶಮಾನ ಜ್ಯೋತಿ ಬೆಳಗುವರು. ಕಲಾ ಪೋಷಕ ಐಕಳ ಹರೀಶ ಶೆಟ್ಟಿಯವರಿಗೆ ಮಂಗಳೂರು ವಿ.ವಿ. ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ ಅವರು ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಪ್ರದಾನ ಮಾಡುವರು. ಶ್ರೀದೇವಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಎ. ಸದಾನಂದ ಶೆಟ್ಟಿಅವರು ‘ಸಾರ್ವಭೌಮ’ ಗ್ರಂಥಾರ್ಪಣೆ ಮಾಡುವರು. ಉದ್ಯಮಿ ಡಾ. ಎ.ಜೆ. ಶೆಟ್ಟಿಅಧ್ಯಕ್ಷತೆ ವಹಿಸುವರು ಎಂದು ಯಕ್ಷಾಂಗಣ ಮಂಗಳೂರು ಇದರ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನ. 21ರಿಂದ ಕ್ರಮವಾಗಿ ಷಡಾನನ ವಿಜಯ, ವಾನರೇಶ್ವರ ವಿಜಯ, ವೀರಾಂಜನೇಯ ವಿಜಯ, ಭೀಮಸೇನ ವಿಜಯ, ಸ್ವರಾಜ್ಯ ಸ್ವಾತಂತ್ರ್ಯ ವಿಜಯ, ವಿಕ್ರಮಾರ್ಜುನ ವಿಜಯ ಮತ್ತು ಯಕ್ಷಲೋಕ ವಿಜಯ ಆಖ್ಯಾನಗಳಿದ್ದು, ಸಮಾರೋಪಕ್ಕೆ ಮುನ್ನ ಸಿರಿಕಿಷ್ಣ ವಿಜಯೊ ಎಂಬ ತುಳು ಪ್ರಸಂಗವನ್ನು ಸಂಯೋಜಿಸಲಾಗಿದೆ ಎಂದರು.
ಸಂಸ್ಮರಣೆ - ಸನ್ಮಾನ : ಪ್ರತಿದಿನದ ಕಾರ್ಯಕ್ರಮದಲ್ಲಿ ಕೀರ್ತಿಶೇಷ ಕಲಾವಿದರು ಮತ್ತು ಕಲಾಪೋಷಕರ ಸಂಸ್ಮರಣೆ ನಡೆಯಲಿದೆ. ಕವಿಭೂಷಣ ಕೆ.ಪಿ. ವೆಂಕಪ್ಪ ಶೆಟ್ಟಿ, ದಿ. ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ, ವಿದ್ವಾನ್ ಕೆ. ಕಾಂತ ರೈ ಮೂಡುಬಿದಿರೆ, ಅತ್ತಾವರ ಶಿವಾನಂದ ಕರ್ಕೇರ, ದಿ. ಎ.ಕೆ. ನಾರಾಯಣ ಶೆಟ್ಟಿಮತ್ತು ಎ.ಕೆ. ಮಹಾಬಲ ಶೆಟ್ಟಿ, ದಿ. ಎನ್.ಎಸ್. ಕಿಲ್ಲೆ ಅವರ ನುಡಿ ನಮನದಲ್ಲಿ ಹಿರಿಯ ಸಾಧಕರಾದ ಬಿ. ಭುಜಬಲಿ ಧರ್ಮಸ್ಥಳ, ಪಟ್ಲ ಗುತ್ತು ಮಹಾಬಲ ಶೆಟ್ಟಿ, ಪೊ›.ಜಿ.ಆರ್. ರೈ, ಕೃಷ್ಣ ಶೆಟ್ಟಿಕುಡುಮಲ್ಲಿಗೆ, ಕೆ.ಕೆ. ಪೂಂಜಾ ಫರಂಗಿಪೇಟೆ ಅವರನ್ನು ಸನ್ಮಾನಿಸಲಾಗುವುದು ಎಂದರು.
ಯಕ್ಷಗಾನಕ್ಕೆ ಕಾಲಮಿತಿ, ಪಾದರಕ್ಷೆ ಕಳಚಿ ಕಟೀಲು ದೇವಿ ಸನ್ನಿಧಾನಕ್ಕೆ ಹೆಜ್ಜೆ ಹಾಕಿದ ಭಕ್ತರು
ಯಕ್ಷಾಂಗಣ ಪ್ರಶಸ್ತಿ ಪ್ರದಾನ: ನ.27ರಂದು ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಹಿರಿಯ ಯಕ್ಷಗಾನ ಕಲಾವಿದ ಎಂ.ಕೆ. ರಮೇಶಾಚಾರ್ಯ ಅವರಿಗೆ 2021-22ನೇ ಸಾಲಿನ ‘ಯಕ್ಷಾಂಗಣ ಗೌರವ ಪ್ರಶಸ್ತಿ’ ಪ್ರದಾನ ಮಾಡುವರು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅಧ್ಯಕ್ಷತೆ ವಹಿಸುವರು ಎಂದರು.
ಬಡ ಮಕ್ಕಳಿಗೆ ಮನೆ ಕಟ್ಟಿಸಿ ಕೊಡುವ 'ಯಕ್ಷಗಾನ ಕಲಾರಂಗದ' ಪುಣ್ಯಕಾರ್ಯ
ಯಕ್ಷಾಂಗಣ ಉಪಾಧ್ಯಕ್ಷ ಬೆಟ್ಟಂಪಾಡಿ ಸುಂದರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್, ಜತೆ ಕಾರ್ಯದರ್ಶಿ ಕೆ. ಲಕ್ಷ್ಮೀನಾರಾಯಣ ರೈ ಹರೇಕಳ, ಮಹಿಳಾ ಪ್ರತಿನಿಧಿ ನಿವೇದಿತಾ ಎನ್. ಶೆಟ್ಟಿಇದ್ದರು.