ರಾಯಚೂರು: ಸಾಲಬಾಧೆಗೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ!

By Ravi Janekal  |  First Published Jul 4, 2024, 11:15 PM IST

ಸಾಲಬಾಧೆ ತಾಳಲಾರದೆ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಮಗಡ್ಡಿ(Muddamgaddi) ಗ್ರಾಮದಲ್ಲಿ ನಡೆದಿದೆ. ಚನ್ನಬಸಪ್ಪ, ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ರೈತ


ರಾಯಚೂರು (ಜು.4): ಸಾಲಬಾಧೆ ತಾಳಲಾರದೆ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಮಗಡ್ಡಿ(Muddamgaddi) ಗ್ರಾಮದಲ್ಲಿ ನಡೆದಿದೆ.

ಚನ್ನಬಸಪ್ಪ, ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ರೈತ. ಕೃಷಿ ಇತರೆ ಕೆಲಸ ಕಾರ್ಯಕಗಳಿಗೆ 10ಲಕ್ಷ ರೂಪಾಯಿಗೂ ಅಧಿಕ ಸಾಲ ಮಾಡಿಕೊಂಡಿದ್ದ ಮೃತ ರೈತ. ಜಮೀನು ಒತ್ತೆ ಇಟ್ಟು 5 ಲಕ್ಷ ರೂಪಾಯಿ ಸಾಲ, ಮನೆ ನಿರ್ಮಾಣಕ್ಕೆ 4 ಲಕ್ಷ 80 ಸಾವಿರ ರೂಪಾಯಿ ಸಾಲ ಇದರ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 1 ಲಕ್ಷ 34 ಸಾವಿರ ರೂಪಾಯಿ ಸಾಲ ಮಾಡಿಕೊಂಡಿದ್ದ ಮೃತ ರೈತ. ಬರಗಾಲ ಜೊತೆಗೆ ಬೆಳೆ ಇಲ್ಲದೇ ಸಾಲ ತೀರಿಸಲಾಗದೆ ಬೇಸತ್ತ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 

Tap to resize

Latest Videos

ಸದ್ಯ ಘಟನೆ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

click me!