ಬಾಕಿ ಮೊತ್ತ ಸೇರಿ 16 ಲಕ್ಷ ಹಣ ಪಾವತಿಸುವಂತೆ ಬ್ಯಾಂಕ್ ನೋಟಿಸ್ ನೀಡಿತ್ತು. ನೋಟಿಸ್ ಗೆ ಹೆದರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತ ಗುರಪ್ಪ.
ಯಾದಗಿರಿ(ಜು.30): ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ಅಗ್ನಿ ಗ್ರಾಮದಲ್ಲಿ ಇಂದು(ಮಂಗಳವಾರ) ನಡೆದಿದೆ. ಗುರಪ್ಪ ಸಗರ (40) ಆತ್ಮಹತ್ಯೆಗೆ ಶರಣಾದ ರೈತ.
ಆತ್ಮಹತ್ಯೆಗೆ ಶರಣಾದ ರೈತ ಗುರಪ್ಪ ಕರ್ನಾಟಕ ಬ್ಯಾಂಕ್ ನಲ್ಲಿ ಏಳು ಲಕ್ಷ ಸಾಲ ಪಡೆದಿದ್ದರು. ಸಾಲ ಮರುಪಾವತಿಸುವಂತೆ ಬ್ಯಾಂಕ್ ನೋಟಿಸ್ ನೀಡಿದ್ದರು ಎಂದು ತಿಳಿದು ಬಂದಿದೆ.
ಸಾಲಬಾಧೆ ತಾಳದೇ ಬೆಳಗಾವಿಯಲ್ಲಿ ಮತ್ತೊಬ್ಬ ರೈತ ಆತ್ಮಹತ್ಯೆ!
ಬಾಕಿ ಮೊತ್ತ ಸೇರಿ 16 ಲಕ್ಷ ಹಣ ಪಾವತಿಸುವಂತೆ ಬ್ಯಾಂಕ್ ನೋಟಿಸ್ ನೀಡಿತ್ತು. ನೋಟಿಸ್ ಗೆ ಹೆದರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗುರಪ್ಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಂಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.