ಮೈಸೂರು: ಅನುಮಾನಾಸ್ಪದ ರೀತಿಯಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Published : Oct 05, 2023, 03:30 AM IST
ಮೈಸೂರು: ಅನುಮಾನಾಸ್ಪದ ರೀತಿಯಲ್ಲಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಸಾರಾಂಶ

ಸುಮಾರು ವರ್ಷಗಳಿಂದ ಹೆಡಿಯಾಲ ಗ್ರಾಮದ ಅವರ ತಾತನ ಮನೆಯಲ್ಲಿಯೇ ವಾಸ ಮಾಡುತ್ತಿದ್ದರು ಎನ್ನಲಾಗಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅನುಮಾನಾಸ್ಪದ ರೀತಿಯಲ್ಲಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಣಿಕಂಠ

ನಂಜನಗೂಡು(ಅ.05):  ನಂಜನಗೂಡು ತಾಲೂಕಿನ ಈರೇಗೌಡನ ಹುಂಡಿ ಗ್ರಾಮದಲ್ಲಿ ಗಿ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗ್ರಾಮದ ನಿವಾಸಿ ಮಣಿಕಂಠ (37) ಎಂಬವರು ನೇಣಿಗೆ ಶರಣಾದವರು. ಸುಮಾರು ವರ್ಷಗಳಿಂದ ಹೆಡಿಯಾಲ ಗ್ರಾಮದ ಅವರ ತಾತನ ಮನೆಯಲ್ಲಿಯೇ ವಾಸ ಮಾಡುತ್ತಿದ್ದರು ಎನ್ನಲಾಗಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅನುಮಾನಾಸ್ಪದ ರೀತಿಯಲ್ಲಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಮ್ಮ ಜಮೀನಿನಲ್ಲಿ ಟೊಮೊಟೊ, ಬಾಳೆ ಇನ್ನಿತರ ಬೆಳೆಗಳನ್ನು ಬೆಳೆದು ಪ್ರಾಣಿಗಳಿಂದ ರಕ್ಷಿಸಲು ರಾತ್ರಿ ವೇಳೆ ಜಮೀನಿನಲ್ಲೇ ಮರದ ಅಟ್ಟಿನಿಯಲ್ಲಿ ಕಾವಲು ಕಾಯುತ್ತಿದ್ದರು. ತಾಯಿ ಸಣ್ಣದೇವಮ್ಮ ಮೃತ ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಬೆಂಗಳೂರು: ಬೆಟ್ಟಿಂಗ್ ಗೀಳು, ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಸಿಪಿಐ ಚಂದ್ರಶೇಖರ್, ಎಸ್ ಐ ರಮೇಶ್ ಕರಕಿಕಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!