* ಅಪ್ಪಂದಿರ ದಿನದಂದೇ ದುರಂತ ಅಂತ್ಯಕಂಡ ತಂದೆ-ಮಗ
* ಅಪಘಾತದಲ್ಲಿ ಅಪ್ಪ-ಮಗ ಸಾವು
* ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ಸಂಭವಿಸಿದ ಅಪಘಾತ
ಚಿಕ್ಕಮಗಳೂರು, (ಜೂನ್.19): ಇಂದು(ಜೂನ್ 19) ಅಪ್ಪಂದಿರ ದಿನಾಚರಣೆಗೆ ಮಕ್ಕಳು ತಮ್ಮ ತಂದೆಯರಿಗೆ ಶುಭಾಶಯ ತಿಳಿಸಿದ್ದಾರೆ. ಮತ್ತೊಂದೆಡೆ ಅಪ್ಪನ ದಿನದಂದೇ ಇಬ್ಬರು ಅಪ್ಪ-ಮಗ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.
ಹೌದು...ಚಿಕ್ಕಮಗಳೂರು ಬಳಿ ಸಂಭವಿಸಿದ ಮತ್ತೊಂದು ಭೀಕರ ಅಪಘಾತದಲ್ಲಿ ತಂದೆ-ಮಗ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.
ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ರಾಜಾಜಿನಗರದ ನರಸಿಂಹರಾಜ್ (58), ಕಿರಣ್ (23) ಸಾವಿಗೀಡಾಗಿದ್ದಾರೆ. ಇವರು ಧರ್ಮಸ್ಥಳದಿಂದ ಬೆಂಗಳೂರಿಗೆ ಮರಳುವಾಗ ಅಪಘಾತ ಸಂಭವಿಸಿದೆ.
ನಟ ಸತೀಶ್ ವಜ್ರ ಕೊಲೆ ಪ್ರಕರಣ, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಗೆಳೆಯ
ಇನ್ನು ಹಾಸನ ಜಿಲ್ಲೆಯ ಆಲೂರು ತಾಲೂಕಿನ ಆಲೂರು-ಈಶ್ವರಹಳ್ಳಿ ರಸ್ತೆಯ ಬಳಿ ಕಾರು-ಕ್ಯಾಂಟರ್ ಮಧ್ಯೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಅಪ್ಪ-ಮಗ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಾಹನ ಲಾರಿಗೆ ಡಿಕ್ಕಿಯಾಗಿ ಓರ್ವ ಮಹಿಳೆ ಸಾವು
ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮದುವೆಗೆ ತೆರಳುತ್ತಿದ್ದ ವಾಹನ ಲಾರಿಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೆ ಓರ್ವ ಮಹಿಳೆ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮದುವೆಗೆ ತೆರಳುತ್ತಿದ್ದ ವಾಹನ ಲಾರಿಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೆ ಓರ್ವ ಮಹಿಳೆ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಅಂಕೋಲಾ ತಾಲೂಕಿನ ಮಾದನಗೇರಿಯಲ್ಲಿ ನಡೆಯುತ್ತಿದ್ದ ಸಂಭಂದಿಕರ ಮದುವೆಗೆ ತೆರಳುತ್ತಿದ್ದರು.