
ಕಾರ್ಕಳ(ಜೂ.19): ಅಂಗವಿಕಲ ಮಗನನ್ನು ಬಾವಿಗೆ ತಳ್ಳಿದ ತಂದೆ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದಲ್ಲಿ ನಿನ್ನೆ(ಶನಿವಾರ) ನಡೆದಿದೆ.
ಪಾಚರಬೆಟ್ಟು ಕೃಷ್ಣ ಪೂಜಾರಿ ಆತ್ಮಹತ್ಯೆ ಮಾಡಿಕೊಂಡವರು. ಇವರು ತನ್ನ ಅಂಗವಿಕಲ ಪುತ್ರ 26 ವರ್ಷದ ದೀಪೇಶ್ ಎಂಬಾತನನ್ನು ಮನೆ ಸಮೀಪದ ಬಾವಿಗೆ ತಳ್ಳಿದ್ದಾರೆ. ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೃಷ್ಣ ಪೂಜಾರಿ ಅವರ ಪತ್ನಿ ಅನಾರೋಗ್ಯಕ್ಕೀಡಾಗಿದ್ದು, ಇದ್ದ ಒಬ್ಬ ಮಗನೂ ಅಂಗವಿಕಲನಾಗಿದ್ದರಿಂದ ಮನನೊಂದು ಈ ಕೃತ್ಯವೆಸಗಿದ್ದಾರೆಂದು ತಿಳಿದುಬಂದಿದೆ.
ಮಾನಸಿಕ ಖಿನ್ನತೆ: ರೈಫಲ್‌ನಿಂದ ಶೂಟ್ ಮಾಡಿಕೊಂಡು ಪೇದೆ ಆತ್ಮಹತ್ಯೆ!
ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ವಿಷ್ಣುವರ್ಧನ್, ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ವೃತ್ತ ನಿರೀಕ್ಷಕ ಸಂಪತ್ ಕುಮಾರ್, ಅಜೆಕಾರು ಎಸ್‌ಐ ಶುಭಕರ್, ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ