
ಸಕಲೇಶಪುರ(ಮೇ.17): ತಾಲೂಕಿನ ಉದೇವಾರ ಗ್ರಾಮದಲ್ಲಿ ತಂದೆಯೆ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಹೀನ ಕೃತ್ಯ ಗುರುವಾರ ಬೆಳಕಿಗೆ ಬಂದಿದೆ. ಗ್ರಾಮದ ಕೂಲಿ ಕಾರ್ಮಿಕ ಮಂಜುನಾಥ್ (34) ಹೀನಕೃತ್ಯ ಎಸಗಿದ ತಂದೆ.
ತಾಲೂಕಿನ ಕ್ಯಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ 10 ವರ್ಷದ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಹಾಸನದಲ್ಲಿ ಮಿತಿಮೀರಿದ ಪುಂಡರ ಹಾವಳಿ; ಮದ್ಯ ಸೇವಿಸಿ ಬಾಲಕಿ ಜೊತೆ ಅನುಚಿತ ವರ್ತನೆ!
ಬಾಲಕಿ ಈ ಕೃತ್ಯವನ್ನು ತನ್ನ ಸಹೋದರಿಗೆ ಹೇಳಿದ ನಂತರ ವಿಷಯ ಬೆಳಕಿಗೆ ಬಂದಿದ್ದು ಬಾಲಕಿಯ ಹೇಳಿಕೆ ಆಧರಿಸಿ ಮಹಿಳಾ ಮತ್ತು ಮಕ್ಕಳಾಧಿಕಾರಿ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ಪೋಲಿಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ