ಹೆತ್ತ ಮಗಳನ್ನು ಸಾಕಲು ಆಗುದಿಲ್ಲ ಮತ್ತು ಅವರ ವಿದ್ಯಾಭ್ಯಾಸ ಮಾಡಿಸಲು ಸಾಧ್ಯವಾಗುವುದಿಲ್ಲ ಅಂತ ಅಂದುಕೊಂಡು ಬರ್ಬರವಾಗಿ ಹತ್ಯೆ ಮಾಡಿದ ತಂದೆಗೆ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ ದಂಡ ವಿಧಿಸಿ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
ಚಿಕ್ಕೋಡಿ (ಜು.05): ಹೆತ್ತ ಮಗಳನ್ನು ಸಾಕಲು ಆಗುದಿಲ್ಲ ಮತ್ತು ಅವರ ವಿದ್ಯಾಭ್ಯಾಸ ಮಾಡಿಸಲು ಸಾಧ್ಯವಾಗುವುದಿಲ್ಲ ಅಂತ ಅಂದುಕೊಂಡು ಬರ್ಬರವಾಗಿ ಹತ್ಯೆ ಮಾಡಿದ ತಂದೆಗೆ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ ದಂಡ ವಿಧಿಸಿ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆ ಹದ್ದಿಯ ಮಂಗಸೂಳಿ ಗ್ರಾಮದ ಮಲ್ಲಾರವಾಡಿ ಬಸವರಾಜ ಈರಪ್ಪ ಮಗದುಮ್ಮ (35) ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ.
ಕಾಗವಾಡ ಪೊಲೀಸ್ ಠಾಣೆಯ ವ್ಯಾಪ್ತಿಯ ಕಾಗವಾಡ ತಾಲೂಕಿನ ಮಂಗಸೂಳಿ ಮಲ್ಲಾರವಾಡಿ ಬಸವರಾಜ ಮಗದುಮ್ಮ ಈತನು ತನ್ನ ಹೆತ್ತ ಮಗಳಾದ ಸಂಗೀತಾ ಬಸವರಾಜ ಮಗದುಮ್ಮ (7) ಈತಳನ್ನು ಸಪ್ಟೆಂಬರ್ 6, 2016ರಂದು ಅಪ್ಪಾ ಸಾಹೇಬ ಶಿಂಧೆ ಇವರ ಪತ್ರಾಸ ಶೆಡ್‌ನಲ್ಲಿ ಯಾರು ಇಲ್ಲದ ಸಮಯದಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಈ ಕುರಿತು ಅಥಣಿ ಸಿಪಿಐ ಎಸ್.ಎಚ್.ಶೇಖರೇಪ್ಪ ದೋಷಾರೋಪನ ಪತ್ರ ಸಲ್ಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್.ಚೌವ್ಹಾಣ ಅವರು ಆರೋಪಿ ಬಸವರಾಜ ಮಗದುಮ್ಮಗೆ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದ್ದಾರೆ.
Chikkodi ಶಾಲೆಗೆ ಹೋದ ಬಾಲಕಿ ಹೆಣವಾದಳು, ಮುಖ್ಯ ಶಿಕ್ಷಕ ಅಮಾನತು
ಶಿಕ್ಷಕನ ಹೊಡೆತಕ್ಕೆ ವಿದ್ಯಾರ್ಥಿ ಐಸಿಯುಗೆ ದಾಖಲು: ನೋಟ್ ಬುಕ್ ತಂದಿಲ್ಲ ಎಂಬ ಕಾರಣಕ್ಕೆ ನಗರದ ಖಾಸಗಿ ಶಾಲೆಯೊಂದರ ಶಿಕ್ಷಕ ವಿದ್ಯಾರ್ಥಿಯೊಬ್ಬನಿಗೆ ಮನಬಂದಂತೆ ಥಳಿಸಿರುವ ಅಮಾನವೀಯ ಘಟನೆ ನಡೆದಿದೆ. ಕಿವಿ ಮತ್ತು ಕಣ್ಣಿಗೆ ತೀವ್ರವಾಗಿ ಪೆಟ್ಟಾಗಿರುವ ವಿದ್ಯಾರ್ಥಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಮಾಗಡಿ ರಸ್ತೆಯ ಅನುಭವ ನಗರದಲ್ಲಿರುವ ಬ್ಲೂವೆಲ್ ಶಾಲೆಯಲ್ಲಿ ಘಟನೆ ನಡೆಸಿದ್ದು, ವಿದ್ಯಾರ್ಥಿ ತನ್ಮಯ್ ಮೇಲೆ ಶಿಕ್ಷಕ ಮಾದೇಶ್ ಹಲ್ಲೆ ನಡೆಸಿದ್ದಾನೆ. ಮಗನ ಮೇಲೆ ಶಿಕ್ಷಕ ನಡೆಸಿರುವ ಹಲ್ಲೆ ಖಂಡಿಸಿ ವಿದ್ಯಾರ್ಥಿಯ ಪೋಷಕರು ಶಾಲೆಯ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.
ಈ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ತಮ್ಮ ಮಗ ತನ್ಮಯ್ ತರಗತಿಗೆ ಬಂದಾಗ ಗಣಿತ ನೋಟ್ ಬುಕ್ ತಂದಿಲ್ಲ ಎಂದು ಶಿಕ್ಷಕ ಮಾದೇಶ್ ಮಗನ ಕೆನ್ನೆಗೆ ಬಲವಾಗಿ ಹೊಡೆದಿದ್ದಾರೆ. ಇದರಿಂದ ನಮ್ಮ ಮಗನ ಕಿವಿ, ಕಣ್ಣಿಗೆ ತೀವ್ರ ಪೆಟ್ಟಾಗಿದ್ದು, ರಕ್ತ ಹೆಪ್ಪುಗಟ್ಟಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಕ್ಟೋರಿಯಾ ಆಸ್ಪತ್ರೆ ಆವರಣದ ವಾಣಿ ವಿಲಾಸ ಮಕ್ಕಳ ಆಸ್ಪತ್ರೆಯ ಐಸಿಯುನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪೋಷಕರು ದೂರಿದ್ದಾರೆ. ಮಗನ ಮೇಲಿನ ಹಲ್ಲೆ ಕುರಿತು ಶಾಲೆಯ ಪ್ರಾಂಶುಪಾಲರನ್ನು ಪ್ರಶ್ನಿಸಿದರೆ ಉಡಾಫೆಯ ಉತ್ತರ ನೀಡುತ್ತಾರೆ.
ಗುಜರಾತ್‌ನಲ್ಲೂ ಕರ್ನಾಟಕ ಪವರ್ ಶೋ: ವಿಜಯಪುರ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ
‘ನಮಗೆ ಪೊಲೀಸ್ ಬೆಂಬಲವಿದೆ ಏನಾದರೂ ಮಾಡಿಕೊಳ್ಳಿ’ ಎಂದು ಹೇಳುತ್ತಾರೆ. ಹಲ್ಲೆ ಮಾಡಿದ ಶಿಕ್ಷಕರ ಬಗ್ಗೆ ವಿಚಾರಿಸಿದರೆ ‘ಅವರಿಗೆ ಕೋವಿಡ್ ಬಂದಿದೆ ಶಾಲೆಗೆ ಬಂದಿಲ್ಲ’ ಎಂದು ಹೇಳುತ್ತಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಸಚಿವರು ಕೂಡಲೇ ಮಧ್ಯಪ್ರವೇಶಿಸಿ ನಮಗೆ ನ್ಯಾಯ ಒದಗಿಸಿಕೊಡಬೇಕು. ಮಕ್ಕಳ ಮೇಲೆ ಹಲ್ಲೆ ಮಾಡುವ ಇಂತಹ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಇಂತಹ ಶಿಕ್ಷಕರನ್ನು ರಕ್ಷಿಸುತ್ತಿರುವ ಶಾಲೆಯ ಆಡಳಿತ ಮಂಡಳಿ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಹಲ್ಲೆಗೊಳಗಾದ ವಿದ್ಯಾರ್ಥಿ ತಂದೆ ನರಸಿಂಹ ಪ್ರತಿಭಟನೆ ವೇಳೆ ಆಗ್ರಹಿಸಿದ್ದಾರೆ.