ಭ್ರೂಣ ಹತ್ಯೆ ಪ್ರಕರಣ: ತಿರುಮಲಶೆಟ್ಟಿಹಳ್ಳಿಯ ಎಸ್​ಪಿಜಿ ಆಸ್ಪತ್ರೆಯ ವೈದ್ಯ ಶ್ರೀನಿವಾಸ್ ಅರೆಸ್ಟ್

By Kannadaprabha News  |  First Published Dec 17, 2023, 9:20 AM IST

ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧ ಎಸ್​ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ. ಶ್ರೀನಿವಾಸರನ್ನು ಪೊಲೀಸರು ಬಂಧಿಸಿದ್ದಾರೆ.  ಭ್ರೂಣ ಹತ್ಯೆ ಪ್ರಕರಣ ಬಯಲಿಗೆ ಬಂದ ನಂತರ ಚೆನ್ನಸಂದ್ರ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಶ್ರೀನಿವಾಸ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಹೊಸಕೋಟೆ (ಡಿ.17): ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧ ಎಸ್​ಪಿಜಿ ಆಸ್ಪತ್ರೆ ಮಾಲೀಕ, ವೈದ್ಯ ಡಾ. ಶ್ರೀನಿವಾಸರನ್ನು ಪೊಲೀಸರು ಬಂಧಿಸಿದ್ದಾರೆ.  ಭ್ರೂಣ ಹತ್ಯೆ ಪ್ರಕರಣ ಬಯಲಿಗೆ ಬಂದ ನಂತರ ಚೆನ್ನಸಂದ್ರ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ಶ್ರೀನಿವಾಸ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಡಾ.ಶ್ರೀನಿವಾಸ್​ ಸೇರಿದಂತೆ ಐವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು ನರ್ಸ್​ ಅನಿತಾ ಎ2, ನರ್ಸ್​​ ನೇತ್ರಾ ಎ3, ರೇವತಿ ಎ4 ಮತ್ತು ರಾಧಿಕಾ ಎ5 ಆರೋಪಿಯಾಗಿದ್ದಾರೆ.

Tap to resize

Latest Videos

undefined

ಹೊಸಕೋಟೆಯ ತಿರುಮಲಶೆಟ್ಟಿಹಳ್ಳಿ ಬಳಿಯ ಎಸ್​​​ಪಿಜಿ ಆಸ್ಪತ್ರೆಯಲ್ಲಿ ಅಬಾರ್ಷನ್ ವೇಳೆ ರೆಡ್ ಹ್ಯಾಂಡ್ ಆಗಿ ವೈದ್ಯರು ಸಿಕ್ಕಿಬಿದ್ದಿದ್ದರು. ತೀವ್ರ ವಿಚಾರಣೆ ನಂತರ ಒಂದಲ್ಲ, ಎರಡಲ್ಲ, 14 ಹೆಣ್ಣು ಭ್ರೂಣಗಳ ಹತ್ಯೆ ಮಾಡಿರುವುದು ಬಯಲಾಗಿದೆ. 

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಲಿಖಿತ ಅನುಮತಿ ಇಲ್ಲದೆ ಸಂತ್ರಸ್ತೆ ಭೇಟಿಗೆ ಅವಕಾಶವಿಲ್ಲ; ಹೈಕೋರ್ಟ್‌

click me!