ಬಕ್ರೀದ್ ಶಾಂತಿ ಸಭೆಯಲ್ಲೇ ಎರಡೂ ಗುಂಪುಗಳ ನಡುವೆ ಮಾರಾಮಾರಿ!

By Ravi Janekal  |  First Published Jun 14, 2024, 8:56 PM IST

ಬಕ್ರೀದ್ ಹಬ್ಬದ ಪ್ರಯುಕ್ತ ಕರೆದಿದ್ದ ಶಾಂತಿ ಸಭೆಯಲ್ಲಿ ಮುಸ್ಲಿಂ ಸಮಾಜದ ಎರಡು ಗುಂಪುಗಳು ಗಲಾಟೆ ಮಾಡಿಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಡಿವೈಎಸ್‌ಪಿ ಕಚೇರಿ ಆವರಣದಲ್ಲಿ ನಡೆದಿದೆ.


ಕೊಪ್ಪಳ (ಜೂ.14): ಬಕ್ರೀದ್ ಹಬ್ಬದ ಪ್ರಯುಕ್ತ ಕರೆದಿದ್ದ ಶಾಂತಿ ಸಭೆಯಲ್ಲಿ ಮುಸ್ಲಿಂ ಸಮಾಜದ ಎರಡು ಗುಂಪುಗಳು ಗಲಾಟೆ ಮಾಡಿಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಡಿವೈಎಸ್‌ಪಿ ಕಚೇರಿ ಆವರಣದಲ್ಲಿ ನಡೆದಿದೆ.

ಬಕ್ರೀದ್ ಹಬ್ಬದ ಹಿನ್ನೆಲೆ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ  ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಇಲಾಖೆ ಶಾಂತಿ ಸಭೆ ಕರೆದಿತ್ತು. ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ಮಾತನಾಡಲು ಮುಂದಾದಾಗ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಎರಡೂ ಗುಂಪುಗಳ ನಡುವೆ ಪೊಲೀಸರ ಮುಂದೆಯೇ ವಾಗ್ವಾದ ನಡೆದು ಮಾರಾಮಾರಿ ನಡೆಯಿತು.

Tap to resize

Latest Videos

undefined

ತ್ಯಾಗ, ಬಲಿದಾನವನ್ನು ಸ್ಮರಿಸುವ ಮುಸಲ್ಮಾನರ ಪವಿತ್ರ ಹಬ್ಬ ಈದುಲ್ ಅಝ್ಹಾ

ಹಾಲಿ ಶಾಸಕ, ಮಾಜಿ ಶಾಸಕರ ಬೆಂಬಲಿಗರಿಂದ ಶಾಂತಿಸಭೆಯಲ್ಲೇ ಮಾರಾಮಾರಿ ನಡೆದಿದೆ. ಇಕ್ಬಾಲ್ ಅನ್ಸಾರಿ ಬೆಂಬಲಿಗರಿಂದ ಅಲಿಖಾನ್ ಮೇಲೆ ಹಲ್ಲೆ ಮುಂದಾಗಿದ್ದರು ಎಂಬ ಆರೋಪ ಹಿನ್ನೆಲೆ ಪೊಲೀಸ್ ಠಾಣೆಗೆ ದೂರು ನೀಡಿದ ಅಲಿಖಾನ್. ಶಾಂತಿ ಸಭೆಯಲ್ಲಿ ಮಾತನಾಡಲು ಅವಕಾಶ ಕೊಡದೇ ಹಲ್ಲೆ ಮುಂದಾಗಿದ್ದ ಅನ್ಸಾರಿ ಬೆಂಬಲಿಗರು.

ರಾಜಕೀಯವಾಗಿ ಹಾವು-ಮುಂಗುಸಿಯಂತಿರುವ ಜನಾರ್ದನ ರೆಡ್ಡಿ, ಇಕ್ಬಾಲ್ ಅನ್ಸಾರಿ. ಕಳೆದ ವಿಧಾನಸಭೆ, ಲೋಕಸಭಾ ಚುನಾವಣೆ ವೇಳೆ ಇಬ್ಬರು ನಾಯಕರು ಪರಸ್ಪರ ನಿಂದಿಸಿದ್ದರು. ಇದರಿಂದ ಇಬ್ಬರ ನಾಯಕರ ಬೆಂಬಲಿಗರ ನಡುವೆಯೂ ಅದೇ ವೈಷಮ್ಯ ಮುಂದುವರಿದಿದೆ. ಹೀಗಾಗಿ ಗಾಲಿ ಜನಾರ್ದನ್ ರೆಡ್ಡಿ ಆಪ್ತ ಅಲಿಖಾನ್‌ಗೆ ಮಾತನಾಡಲು ಅವಕಾಶ ಕೊಡದೇ ಮಾರಾಮಾರಿ ನಡೆದಿದೆ.

ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.

click me!