
ಕಲಬುರಗಿ (ಜ.26): ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಬರಲಿಲ್ಲ ಎನ್ನುವ ಕಾರಣಕ್ಕೆ ಹಾಸ್ಟೆಲ್ ವಿದ್ಯಾರ್ಥಿಯೊಬ್ಬನ ಮೇಲೆ ಮರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಕಲಬುರಗಿ ನಗರದ ಹೈಕೋಟ್೯ ಹತ್ತಿರ ಇರೋ ಬಾಲಕರ ಹಾಸ್ಟೆಲ್ ನಲ್ಲಿ ನಡೆದಿದೆ.
ಹಾಸ್ಟೆಲ್‌ನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ವಿದ್ಯಾರ್ಥಿಗಳು ಪೂಜೆ ಸಲ್ಲಿಸುತ್ತಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಪೂಜೆಗೆ ಬರಲು ಆಗಿಲ್ಲ. ಇದರಿಂದ ರೊಚ್ಚಿಗೆದ್ದ ಹಾಸ್ಟೆಲ್ ವಿದ್ಯಾರ್ಥಿಗಳು ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸಿ ಥಳಿಸಿದ್ದಾರೆ ಅಲ್ಲದೇ ಅರೆಬೆತ್ತಲೆಗೊಳಿಸಿ ವಿದ್ಯಾರ್ಥಿ ಕೈಯಲ್ಲಿ ಅಂಬೇಡ್ಕರ್ ಫೋಟೊ ಕೊಟ್ಟು ಮೆರವಣಿಗೆ ಮಾಡಿ ಅಮಾನವೀಯವಾಗಿ ವರ್ತಿಸಿದ್ದಾರೆ.
ಕಲಬುರಗಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ: ಉದ್ದೇಶಪೂರ್ವಕ ಸಂಚು?
ವಿದ್ಯಾರ್ಥಿ ಮೇಲೆ ಹಲ್ಲೆಗೈದು ಅಮಾನವೀಯವಾಗಿ ವರ್ತಿಸಿದ ವಿದ್ಯಾರ್ಥಿಗಳೆಲ್ಲರೂ ಅಪ್ರಾಪ್ತ ಬಾಲಕರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದಾರೆ. ಸದ್ಯ ಘಟನೆ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆ.341, 323, 504, 505(2) 506 ಅಡಿ ಪ್ರಕರಣ ದಾಖಲಾಗಿದೆ.
ಜಗದೀಶ ಶೆಟ್ಟರ್ ಬಿಜೆಪಿಗೆ ಮರುಸೇರ್ಪಡೆ ಹಿಂದೆ ಐಟಿ, ಇಡಿ ಕೈವಾಡ! ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ಕಳೆದ ವಾರ ಅಂಬೇಡ್ಕರ್ ಭಾವಚಿತ್ರಕ್ಕೆ ದುಷ್ಕರ್ಮಿಗಳು ಅವಮಾನಿಸಿದ್ದ ಘಟನೆ ಜಿಲ್ಲೆಯಾದ್ಯಂತ ಭಾರೀ ಘರ್ಷಣೆ ಉಂಟುಮಾಡಿತ್ತು. ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಘಟನೆ ಬೆನ್ನಲ್ಲೇ ಮತ್ತೆ ಇದೀಗ ಅಂಬೇಡ್ಕರ್ ಭಾವಚಿತ್ರದ ಪೂಜೆ ಸಂಬಂಧ ವಿದ್ಯಾರ್ಥಿ ಮೇಲೆ ಗಂಭೀರವಾಗಿ ಹಲ್ಲೆ ನಡೆಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ