
ರಾಮನಗರ(ಆ. 08) ಸಿನಿಮಾ ಚಿತ್ರೀಕರಣದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಚಿತ್ರೀಕರಣ ವೇಳೆ ವಿದ್ಯುತ್ ಅವಘಡ ದಿಂದ ಸಾವಾಗಿದೆ. ಲವ್ ಯೂ ರಚ್ಚು ತಂಡ ಚಿತ್ರೀಕರಣದ ವೇಳೆ ಅವವಘಡ ಸಂಭವಿಸಿದೆ. ಫೈಟರ್ ವಿವೇಕ್ ಎನ್ನುವರು ಸಾಹಸ ದೃಶ್ಯದ ಚಿತ್ರೀಕರಣ ವೇಳೆ ಸಾವನ್ನಪ್ಪಿದ್ದಾರೆ.
ರಾಮನಗರದ ಬಿಡದಿ ಬಳಿ ಹೋಬಳಿಯ ಜೋಗರಪಾಳ್ಯದಲ್ಲಿ ದುರ್ಘಟನೆ ನಡೆದಿದೆ. ನಟ ಅಜಯ್ ರಾವ್ ಹಾಗೂ ನಟಿ ಡಿಂಪಲ್ ಕ್ವೀನ್ ರಚಿರಾ ರಾಮ್ ಅಭಿನಯದ ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಅವಘಡ ನಡೆದ ಬಳಿಕ ಚಿತ್ರೀಕರಣ ನಿಲ್ಲಿಸಲಾಗಿದೆ.
ರಚಿತಾ ಜತೆ ಅಜಯ್ ರಾವ್ ರೋಮ್ಯಾನ್ಸ್
ಶಾರ್ಟ್ ಸರ್ಕ್ಯೂಟ್ ನಿಂದ ಇಬ್ಬರಿಗೆ ಗಾಯವಾಗಿತ್ತು. ಇದರಲ್ಲಿ ಒಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ವ್ಯಕ್ತಿಗೆ ಚಿಕಿತ್ಸೆಗಾಗಿ ಬೆಂಗಳೂರು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಸುಮಾರು ನಾಲ್ಕು ದಿನಗಳಿಂದ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರೀಕರಣಕ್ಕೆ ಪೊಲೀಸರಿಂದ ಯಾವುದೇ ಅನುಮತಿ ತೆಗೆದುಕೊಳ್ಳದೆ ಚಿತ್ರೀಕರಣ ಮಾಡುತ್ತಿದ್ದರು ಎನ್ನುವ ಆರೋಪವೂ ಕೇಳಿಬಂದಿದೆ.
ಚಿತ್ರೀಕರಣದ ವೇಳೆ ಅವಘಡ ನಡೆದರು ಮಾಹಿತಿ ನೀಡದೆ ಚಿತ್ರತಂಡ ಕಾಲು ಕಿತ್ತಿದೆ.ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಸಾಹಸ ದರಶ್ಯ ಚಿತ್ರೀಕರಣ ಮಾಡುವ ವೇಳೆ ಕನ್ನಡದ ಇಬ್ಬರು ಖಳನಟರು ದುರಂತ ಸಾವನ್ನಪ್ಪಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ