
ಮುಂಬೈ ( ಜು. 20) ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರ ಮಾರುಕಟ್ಟೆ ಆರೋಪದ ಮೇಲೆ ಬಂಧಿಸಿದ್ದು ಒಂದು ಕಡೆಯಾಗಿದ್ದರೆ ಇನ್ನೊಂದು ಕಡೆ ಮುಂಬೈ ಪೊಲೀಸರು ವೇಶ್ಯಾವಾಟಿಕೆ ಜಾಲವೊಂದನ್ನು ಪತ್ತೆ ಮಾಡಿದ್ದಾರೆ.
ವೇಶ್ಯಾವಾಟಿಕೆ ದಂಧೆ ನಡೆಸಿದ ಆರೋಪದ ನಿರ್ಮಾಪಕ ಸೇರಿ ಇನ್ನಿಬ್ಬರನ್ನು ಬಂಧಿಸಲಾಗಿದೆ. ತನ್ನ ಚಿತ್ರದಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಮಹಿಳೆಯರನ್ನು ದಂಧೆಗೆ ದೂಡುತ್ತಿದ್ದ ಎಂದು ಪೊಲೀಸ್ ಅಧಿಕಾರಿ ಡಾ.ಮಹೇಶ್ ಪಾಟೀಲ್ ಹೇಳಿದ್ದಾರೆ.
ವೇಶ್ಯಾವಾಟಿಕೆ ಕಿಂಗ್ ಪಿನ್ ತೃತೀಯ ಲಿಂಗಿ
ಹಲವಾರು ವರ್ಷಗಳಿಂದ ಮೀರಾ ರಸ್ತೆಯ ವಸತಿ ಸಮುಚ್ಚಯದಿಂದ ಈ ದಂಧೆ ನಡೆಯುತ್ತಿದೆ ಎಂಬ ಮಾಹಿತಿಗಳು ಇದ್ದವು. ಮುಖ್ಯ ಆರೋಪಿ ಖಾನಯಲಾಲ್ ಬಾಲ್ಚಂದಾನಿಗೆ ಏಜೆಂಟರಾಗಿ ಕಾರ್ಯನಿರ್ವಹಿಸುತ್ತಿದ್ದ ವನಿತಾ ಇಂಗಲ್ ಕೆಲಸ ಮಾಡುತ್ತಿದ್ದಳು.
ಗ್ರಾಹಕರ ಸೋಗಿನಲ್ಲಿ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಬಂಧಿತ ಮೂವರ ವಿರುದ್ಧ ಮೀರಾ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ