
ದಾಬಸ್‌ಪೇಟೆ(ಜ.31): ಉದ್ಯಮಿಯೊಬ್ಬರನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ ಚಿತ್ರಹಿಂಸೆ ನೀಡಿ, 28 ಲಕ್ಷ ರು. ದೋಚಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಲ್ವೆ ಗ್ರಾಮದ ನಿವಾಸಿ ಇಟ್ಬಾಲ್, ಅಪಹರಣಕ್ಕೆ ಒಳಗಾದವರಾಗಿದ್ದು, ಬಂಕ್ ಹಾಗೂ ಟ್ರಾನ್ಸ್ ಪೋರ್ಟ್ ಉದ್ಯಮಿಯಾಗಿದ್ದಾರೆ.
ಘಟನಾ ಹಿನ್ನೆಲೆ:
ಜ.24ರಂದು ಉದ್ಯಮಿ ಇನ್ಸಾಲ್ ದೇವನಹಳ್ಳಿಯ ಖಾಸಗಿ ಹೋಟೆಲ್ ಗೆ ಹೋಗಿ ಅಲ್ಲಿ ಕೆಲಸ ಮುಗಿಸಿ ಬೆಂಗಳೂರಿನಲ್ಲಿರುವ ತನ್ನ ಸ್ನೇಹಿತ ಕರೀಂ ಮನೆಯಲ್ಲಿ ಉಳಿದುಕೊಂಡು ಮರುದಿನ ಜ.25ರಂದು ಶನಿವಾರ ಬೆಳಗ್ಗೆ ಕರೀಮ್‌ನಿಂದ ಒಂದುವರೆ ಲಕ್ಷ ರುಪಾಯಿ ಪಡೆದುಕೊಂಡು, ರಾತ್ರಿ 10 ಗಂಟೆಗೆ ರಾಷ್ಟ್ರೀಯ ಹೆದ್ದಾರಿ 75ರ ಕುಣಿಗಲ್ ವೃತ್ತದ ಬಳಿ ಇರುವ ಸಿಮ್ ಬಿರಿಯಾನಿ ಹೋಟೆಲ್ ನಲ್ಲಿ ಊಟ ಮುಗಿಸಿ, ನೆಲಮಂಗಲದಿಂದ ಮಂಗಳೂರು ಮಾರ್ಗವಾಗಿ ತೆರಳುತ್ತಿದ್ದರು.
ಕಿಡ್ನಾಪ್ ಮಾಡಿ ₹5 ಕೋಟಿ ಬೇಡಿಕೆ ಇಟ್ಟಿದ್ದವರೇ ವೈದ್ಯನಿಗೆ ₹300 ಕೊಟ್ಟು ಹೋದ್ರು
ಮಾರಕಾಸ್ತ್ರಗಳಿಂದ ಬೆದರಿಸಿ ಕಿಡ್ನಾಪ್ :
ಈ ಸಮಯಕ್ಕೆ ಸಮಯದಲ್ಲಿ ಮಾರ್ಗ ಮಧ್ಯ ಹೆದ್ದಾರಿಯಲ್ಲಿ ಮೂರು ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ಇಕ್ಬಾಲ್ ಕಾರು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಅದೇ ಕಾರಿನಲ್ಲಿ ಅವರನ್ನು ಅಪಹರಿಸಿದ್ದಾರೆ. ಅಪಹರಿಸಿದ ನಂತರ ಅಜ್ಞಾತ ಸ್ಥಳಕ್ಕೆ ಎತ್ತೊಯ್ದು ಎರಡು ದಿನಗಳ ಕಾಲ ನೀಡಬಾರದ ಚಿತ್ರಹಿಂಸೆ ನೀಡಿದ್ದಾರೆ. ಅಲ್ಲದೆ ತನ್ನ ಬ್ಯಾಂಕ್ ಖಾತೆಯಿಂದ ಮೊಬೈಲ್ ಮೂಲಕ 15 ಲಕ್ಷ ರುಪಾಯಿ ವರ್ಗಾವಣೆ ಮಾಡಿಕೊಂಡು, ಭಾನುವಾರ ಸಕಲೇಶಪುರದಲ್ಲಿದ್ದ ಇಟ್ಬಾಲ್ ಸಹೋ ದರನ ರೆಸಾರ್ಟ್‌ಗೆ ತೆರಳಿ, ಅಲ್ಲಿಯೂ ತನ್ನ ಸಹೋ ದರನನ್ನು ಕೊಲೆ ಮಾಡುವುದಾಗಿ ಬೆದರಿಸಿ ಆತನಿಂ ದಲೂ 13 ಲಕ್ಷ ಹಣ ಪಡೆದುಕೊಂಡು, ಇಟ್ಬಾಲ್‌ನನ್ನು ರೆಸಾರ್ಟ್ ಬಳಿಯೇ ಬಿಟ್ಟು ಕಾರು ಹಾಗೂ ಮೊಬೈಲ್ ದೋಚಿಕೊಂಡು ಪರಾರಿಯಾಗಿದ್ದಾರೆ.
ಕೊಲೆ ಬೆದರಿಕೆ:
ಅಪಹರಣ ಸಂದರ್ಭದಲ್ಲಿ ಪೊಲೀ ಸರಿಗೆ ದೂರು ಕೊಟ್ಟರೆ ನಿನ್ನ ಉದ್ಯಮವನ್ನು ನಾಶಮಾಡುವುದಲ್ಲದೇ ಕೊಲ್ಲುವುದಾಗಿಯೂ ಬೆದ ರಿಕೆ ಹಾಕಿದ್ದಾರೆ. ಘಟನಾ ಸಂಬಂಧ ಇಟ್ಬಾಲ್ ನೆಲ ಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರು ದಾಖಲಿಸಿಕೊಂಡ ನೆಲಮಂಗಲ ಗ್ರಾಮಾಂತರ ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ