* ಕಾಟನ್ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ
* ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ
* ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ
ಬೆಂಗಳೂರು(ಜ.17): ಮಹಿಳೆಯೊಬ್ಬರು(Woman) ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಕಾಟನ್ಪೇಟೆ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ.
ಭಕ್ಷಿ ಗಾರ್ಡನ್ ನಿವಾಸಿ ದಿವ್ಯಾ(23) ಆತ್ಮಹತ್ಯೆಗೆ ಶರಣಾದವರು. ಮೂರು ವರ್ಷದ ಹಿಂದೆ ಫೈನಾನ್ಸಿಯರ್(Financier) ಯಶವಂತ್ ಅವರು ದಿವ್ಯಾ ಅವರನ್ನು ವಿವಾಹವಾಗಿದ್ದರು(Marriage). ದಂಪತಿಗೆ ಒಂದು ಗಂಡು ಮಗುವಿದೆ. ಯಶವಂತ್ ಕಾರ್ಯ ನಿಮಿತ್ತ ಮೂರು ದಿನಗಳ ಹಿಂದೆ ದೆಹಲಿಗೆ ತೆರಳಿದ್ದರು. ಭಾನುವಾರ ಬೆಳಗ್ಗೆ ದಿವ್ಯಾ ತಿಂಡಿ ತಿಂದು ಮಲಗುವ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಈ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Crime News ಕೊಟ್ಟ ಸಾಲ ಕೇಳಿದ್ದಕ್ಕೆ ಅನೈತಿಕ ಸಂಬಂಧ ಪಟ್ಟ, ಮನನೊಂದು ತಾಯಿ-ಮಕ್ಕಳು ಆತ್ಮಹತ್ಯೆ
ಬೆಳಗ್ಗೆ 10.30ರ ಸುಮಾರಿಗೆ ಯಶವಂತ್ ತಾಯಿ ಕೊಠಡಿಯ ಬಾಗಿಲು ತಟ್ಟಿಕೂಗಿದ್ದು, ಪ್ರತಿಕ್ರಿಯೆ ಬಂದಿಲ್ಲ. ಬಳಿಕ ಗಾಬರಿಗೊಂಡು ಸ್ಥಳೀಯರ ನೆರವಿನಿಂದ ಕೊಠಡಿಯ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು(Police) ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಯಾವುದೇ ಡೆತ್ ನೋಟ್(Deathnote) ಸಿಕ್ಕಿಲ್ಲ. ಪತ್ನಿಯ ಸಾವಿನ ಸುದ್ದಿ ತಿಳಿದು ಯಶವಂತ್ ಸಂಜೆ ದೆಹಲಿಯಿಂದ ನಗರಕ್ಕೆ ವಾಪಸಾಗಿದ್ದಾರೆ. ಘಟನೆ ಈ ಸಂಬಂಧ ಎಫ್‌ಐಆರ್ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಾಲಬಾಧೆಯಿಂದ ನಿವೃತ್ತ ಯೋಧ ಆತ್ಮಹತ್ಯೆಗೆ ಶರಣು
ಸಿಂದಗಿ(Sindagi): ಸಾಬಾಧೆಯಿಂದ(Loan) ನಿವೃತ್ತ ಯೋಧನೊರ್ವ(Ex Army Soldier) ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಸೋಂಪುರ ರಸ್ತೆಯ ಸಮೀಪದ ಹೊಲವೊಂದರಲ್ಲಿ ಭಾನುವಾರ ನಡೆದಿದೆ.
ತಾಲೂಕಿನ ಕಕ್ಕಳಮೇಲಿ ಗ್ರಾಮದ ರೇವಣಸಿದ್ದ ನಿಂಗಪ್ಪದೇಸಾಯಿ (46) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಸೈನಿಕ 20 ವರ್ಷಗಳ ಕಾಲ ಬಿಎಸ್‌ಎಫ್‌ದಲ್ಲಿ(BSF) ಹರಿಯಾಣ, ಪಂಜಾಬ ಸೇರಿದಂತೆ ಅನೇಕ ಕಡೆಗಳಲ್ಲಿ ಸೇವೆ ಸಲ್ಲಿಸಿ ಸುಮಾರು 6-7 ತಿಂಗಳ ಹಿಂದೆಯೇ ನಿವೃತ್ತಿಯಾದವರು. ನಿವೃತ್ತಿಯ ನಂತರ ತಮ್ಮ ಹೊಲದಲ್ಲಿ ಕೃಷಿ ಕಾಯಕ ಮಾಡಿಕೊಂಡವರು. ಕೃಷಿಗೆ ಖಾಸಗಿಯಾಗಿ ಮತ್ತು ವಿವಿಧ ಬ್ಯಾಂಕುಗಳಲ್ಲಿ ಸುಮಾರು .10.50 ಲಕ್ಷ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ಬಾಧೆತಾಳದೆ ಮನನೊಂದುಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ ಮೂಲಗಳು ತಿಳಿಸಿವೆ. ಈ ಕುರಿತು ಪ್ರಕರಣ ಸಿಂದಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಸರ್ಕಾರಿ ಕಟ್ಟಡದಿಂದ ಜಿಗಿದು ಡಿ ಗ್ರೂಪ್ ನೌಕರ ಆತ್ಮಹತ್ಯೆ
ಮದ್ದೂರು(Maddur): ಪಟ್ಟಣದ ತಾಲೂಕು ಕಚೇರಿ ಕಟ್ಟಡದ ಮೇಲಿಂದ ಜಿಗಿದು ಡಿ ಗ್ರೂಪ್ ನೌಕರ(D Group Employee) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
Suicide :LIC ಏಜೆಂಟನ ಸಂಗ ಬಿಡದ ಪತ್ನಿ, ಪುತ್ರನೊಂದಿಗೆ ನಾಗಮಂಗಲ ಕೆರೆಗೆ ಹಾರಿ ಪ್ರಾಣ ಬಿಟ್ಟ ಪತಿ
ಮಂಡ್ಯ(Mandya) ತಾಲೂಕು ಕಚೇರಿಯ ರೆಕಾರ್ಡ್ ರೂಂನಲ್ಲಿ ಕೆಲಸ ಮಾಡುತ್ತಿದ್ದ ವೆಂಕಟೇಶ್ (48) ಮೃತರು. 2019ರಲ್ಲಿ ಕಂದಾಯ ಸಚಿವ ಆರ್. ಅಶೋಕ್ ತಾಲೂಕು ಕಚೇರಿಗೆ ಭೇಟಿ ನೀಡಿದ ವೇಳೆ ಆರ್‌ಟಿಸಿ ನೀಡಲು ವೆಂಕಟೇಶ್ ಲಂಚ ಕೇಳುತ್ತಿದ್ದಾರೆ ಎಂದು ರೈತರು(Farmers) ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಅಶೋಕ್ ಅವರು ವೆಂಕಟೇಶ್‌ನನ್ನು ಅಮಾನತು ಮಾಡಿದ್ದರು. ಆರು ತಿಂಗಳ ನಂತರ ಅಮಾನತು ವಾಪಸ್ ಪಡೆದ ಜಿಲ್ಲಾಧಿಕಾರಿಗಳು, ಮಂಡ್ಯ ತಾಲೂಕು ಕಚೇರಿಗೆ ವರ್ಗಾವಣೆ ಮಾಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪರೀಕ್ಷೆಯಲ್ಲಿ ಕಡಿಮೆ ಅಂಕ: ವಿದ್ಯಾರ್ಥಿ ಆತ್ಮಹತ್ಯೆ
ಕಾರ್ಕಳ: ಪರೀಕ್ಷೆಯಲ್ಲಿ(Exam) ಕಡಿಮೆ ಅಂಕ ಬಂದಿದ್ದಕ್ಕೆ ಮನೆಯವರು ಬುದ್ಧಿಮಾತು ಹೇಳಿದ್ದಕ್ಕೆ ನೊಂದು ವಿದ್ಯಾರ್ಥಿ(Student) ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಶಿವಪುರ ಕೆರೆಬೆಟ್ಟು ಎಂಬಲ್ಲಿ ನಡೆದಿದೆ. ಹೆಬ್ರಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಅನ್ವಿತ್ ಶೆಟ್ಟಿ(14) ನೇಣಿಗೆ ಶರಣಾದ ವಿದ್ಯಾರ್ಥಿ.
ಬಾತ್‌ರೂಮಿಗೆ ಹೋದವ ಬಾಗಿಲು ಬಡಿದರೂ ತೆರೆಯದಿದ್ದಾಗ ಆತನ ತಮ್ಮ ಬಾತ್‌ರೂಮಿನ ಕಿಂಡಿಯಲ್ಲಿ ಇಣುಕಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂತು. ಕೂಡಲೇ ಪೋಷಕರು ಹೆಬ್ರಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಆತ ಆಗಲೇ ಮೃತಪಟ್ಟಿದ್ದ. ಆತ್ಮಹತ್ಯೆಗೆ ಮುನ್ನ ಡೆತ್‌ನೋಟ್ ಬರೆದಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಕಾರಣ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬರೆದ್ದಾನೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.