* ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ನಡೆದ ಘಟನೆ
* ಮಹಿಳೆ ಬಟ್ಟೆ ಹರಿದು ಹಾಕಿ ಅರೆಬೆತ್ತಲೆಗೊಳಿಸಿ ಥಳಿತ
* ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ವರದಿ: ಭರತ್ ರಾಜ್ ಏಷ್ಯಾನೆಟ್ ಸುವರ್ಣ ನ್ಯೂಸ್, ಮಂಗಳೂರು
ಮಂಗಳೂರು(ಏ.24): ಬೆಳ್ತಂಗಡಿಯಲ್ಲಿ ಆದಿವಾಸಿ ಮಹಿಳೆಯನ್ನು(Tribe Woman) ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಆರೋಪದಡಿ ಬಿಜೆಪಿ(BJP) ಮುಖಂಡ ಸೇರಿ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ( Dakshina Kannada) ಜಿಲ್ಲೆಯ ಬೆಳ್ತಂಗಡಿ(Belthangady) ತಾಲೂಕಿನ ಗುರಿಪಳ್ಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಜಾಗದ ತಕರಾರಿನ ಹಿನ್ನೆಲೆಯಲ್ಲಿ ತಂಡದಿಂದ ಮಹಿಳೆ ಮೇಲೆ ಹಲ್ಲೆ(Assault) ನಡೆಸಲಾಗಿದೆ. ಬಟ್ಟೆ ಹರಿದು ಹಾಕಿ ಅರೆಬೆತ್ತಲೆಗೊಳಿಸಿ ಗಂಭೀರ ಹಲ್ಲೆ ನಡೆಸಿದ ಆರೋಪ ವ್ಯಕ್ತವಾಗಿದ್ದು, ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಸುಗುಣ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರ ವಿರುದ್ದ ಎಫ್‌ಐಆರ್(FIR) ದಾಖಲಾಗಿದೆ. ಐಪಿಸಿ 143, 147, 148, 323, 324, 504, 354, 354(B), 506, 149 ಅಡಿ ಪ್ರಕರಣ ದಾಖಲಾಗಿದ್ದು, ಎಸ್.ಟಿ.ಮೋರ್ಛಾ ಅಧ್ಯಕ್ಷ ಸೇರಿ ಹಲವರು ಕೃತ್ಯ ಎಸಗಿದ್ದಾಗಿ ಆರೋಪಿಸಲಾಗಿದೆ. ಮಹಿಳೆಗೆ ಅರೆಬೆತ್ತಲೆ ಮಾಡಿ ಹಲ್ಲೆ ನಡೆಸಿದ ವಿಡಿಯೋ ಮಾಡಿದ ಬಗ್ಗೆಯೂ ದೂರು ನೀಡಲಾಗಿದೆ. ಬೆಳ್ತಂಗಡಿ ಪೊಲೀಸ್(Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
ಸಂತಾನ ಇಲ್ಲದವರಿಗೆ ಮಕ್ಕಳನ್ನು ಕದ್ದು ಮಾರುತ್ತಿದ್ದ ವಕೀಲೆ ಬಂಧನ
ಏನಿದು ಪ್ರಕರಣ?
ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸಲ್ಲಿಸಿದ್ದ 94ಸಿ ಅರ್ಜಿಯ ಅಳತೆಗೆಂದು ಅಧಿಕಾರಿಗಳು ಬಂದಿದ್ದರು. ಈ ಸಂದರ್ಭ ಜಾಗದ ಬಗ್ಗೆ ಇನ್ನೊಂದು ತಂಡ ತಕರಾರು ತೆಗೆದಿದೆ. ಇದರಿಂದಾಗಿ ಅಳತೆಗೆ ಬಂದವರು ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದಾರೆ. ಅಧಿಕಾರಿಗಳು ತೆರಳಿದ ಬಳಿಕ ಹಲ್ಲೆ ನಡೆಸಲಾಗಿದೆ ಎಂದು ದೂರಿದ್ದಾರೆ.
ಮಹಿಳೆಯರೂ ಇದ್ದ ತಂಡ ಮೊದಲು ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅಕ್ಕನ ಮೇಲೆ ಹಲ್ಲೆ ನಡೆಸಿದ್ದು, ಇದನ್ನು ನೋಡಿ ಅಕ್ಕನ ರಕ್ಷಣೆಗೆ ತೆರಳಿದ ತಂಗಿಯ ಮೇಲೆ ಇವರು ಮುಗಿಬಿದ್ದು ಆಕೆಯ ಬಟ್ಟೆಗಳನ್ನು ಸಂಪೂರ್ಣವಾಗಿ ಹರಿದುಹಾಕಿದ್ದಾರೆ. ಅಲ್ಲದೇ ಅರೆಬೆತ್ತಲೆಯಾಗಿದ್ದ ಮಹಿಳೆಯ ವಿಡಿಯೊ ಚಿತ್ರೀಕರಣ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸಂತ್ರಸ್ಥೆಯ ತಾಯಿಯ ಮೇಲೂ ಇವರು ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳ ತಂಡ ಅಲ್ಲಿಂದ ತೆರಳಿದ ಬಳಿಕವಷ್ಟೇ ಈ ಮಹಿಳೆಯರಿಗೆ ಮನೆಗೆ ಹೋಗಲು ಸಾಧ್ಯವಾಯಿತು ಎಂದು ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಮದ್ವೆಗೂ ಮುನ್ನವೇ ಗರ್ಭಿಣಿ ಮಾಡಿದ, ಬಳಿಕ ಯಾರಿಗೂ ಗೊತ್ತಾಗದಂತೆ ತಾಳಿಕಟ್ಟಿ ಎಸ್ಕೇಪ್
ನಕಲಿ ಶ್ಯೂರಿಟಿ ನೀಡಿ ನ್ಯಾಯಾಲಯಕ್ಕೇ ಮೋಸ ಮಾಡ್ತಿದ್ದ ಖದೀಮರು..!
ಬೆಂಗಳೂರು: ಹಣದಾಸೆಗೆ ಜೈಲಿನಲ್ಲಿರುವ ಆರೋಪಿಗಳಿಗೆ ಜಾಮೀನಿಗೆ ಕೊಡಿಸಲು ನ್ಯಾಯಾಲಯಕ್ಕೆ(Court) ನಕಲಿ ದಾಖಲೆ ಸಲ್ಲಿಸಿ ಶ್ಯೂರಿಟಿ ನೀಡುತ್ತಿದ್ದ 9 ಜನರ ತಂಡವನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂಜೀವಿನಿ ನಗರದ ಪುಟ್ಟಸ್ವಾಮಿ, ಮಧುಗಿರಿಯ ನಸ್ರೀನ್, ನಗರದ ಜಗದೀಶ್ ಅಲಿಯಾಸ್ ಬಾಂಬೆ, ಚಂದ್ರೇಗೌಡ, ಸೊನ್ನೇಗೌಡ, ವೆಂಕಟೇಶ್, ಶಿಕ್ಷಣ ಇಲಾಖೆಯ ‘ಡಿ’ ಗ್ರೂಪ್ ನೌಕರ ಅಂಜಿನಪ್ಪ, ಮಂಜುನಾಥ, ರಾಜಣ್ಣ ಬಂಧಿತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ನಕಲಿ ಸೀಲುಗಳು, ನಕಲಿ ಪಹಣಿಗಳು, ಕಂಪ್ಯೂಟರ್, ಪ್ರಿಂಟರ್, ಸ್ಕಾ್ಯನರ್, ಲ್ಯಾಮಿನೇಷನ್ ಮಿಷನ್, ಆಟೋ ರಿಕ್ಷಾ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿ(Accused) ಪುಟ್ಟಸ್ವಾಮಿ ಜೈಲಿನಲ್ಲಿರುವ ಆರೋಪಿಗಳನ್ನು ಸಂಪರ್ಕಿಸಿ ಜಾಮೀನಿಗೆ ಶ್ಯೂರಿಟಿ ಕೊಡಿಸುವುದಾಗಿ ವ್ಯವಹಾರ ಕುದುರಿಸುತ್ತಿದ್ದ. ಬಳಿಕ ತನ್ನ ಸಹಚರರ ಜತೆ ತಾಲೂಕು ಕಚೇರಿಗಳಿಗೆ ತೆರಳಿ ರೈತರು ಎಂದು ಹೇಳಿಕೊಂಡು ರೈತರ ಪಹಣಿ ಮತ್ತು ಮ್ಯೂಟೇಷನ್‌ಗಳನ್ನು ಪಡೆಯುತ್ತಿದ್ದರು. ಬಳಿಕ ಆರೋಪಿ ಮಂಜುನಾಥ್ ಹಾಗೂ ನಸ್ರೀನ್ ಮೂಲಕ ಪಹಣಿಯಲ್ಲಿರುವ ವ್ಯಕ್ತಿಯ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ತಯಾರಿಸುತ್ತಿದ್ದರು. ಬಳಿಕ ಶಿಕ್ಷಣ ಇಲಾಖೆಯ ಡಿ ಗ್ರೂಪ್ ನೌಕರ ಅಂಜಿನಪ್ಪನ ನೆರವಿನಿಂದ ನಕಲಿ ಸೀಲು ಬಳಸಿಕೊಂಡು ಶ್ಯೂರಿಟಿ ಬಾಂಡ್ ದೃಢಿಕರಿಸಿ ದಾಖಲೆ ಸಿದ್ಧಪಡಿಸಿ ವಕೀಲರ ಮೂಲಕ ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುತ್ತಿದ್ದರು. ಆರೋಪಿಗಳ ಜಾಮೀನಿಗೆ(Bail) ಶ್ಯೂರಿಟಿ ನೀಡುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.