Mangaluru: ಅರಣ್ಯಾಧಿಕಾರಿಗೆ ನಿಂದನೆ: ಶಾಸಕ ಹರೀಶ್‌ ಪೂಂಜಾ ವಿರುದ್ಧ ಎಫ್ಐಆರ್ ದಾಖಲು!

By Govindaraj S  |  First Published Oct 18, 2023, 9:32 AM IST

ಅರಣ್ಯಾಧಿಕಾರಿಗಳು ಹಾಗೂ ಬಿಜೆಪಿ ಶಾಸಕರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 


ಮಂಗಳೂರು (ಅ.18): ಅರಣ್ಯಾಧಿಕಾರಿಗಳು ಹಾಗೂ ಬಿಜೆಪಿ ಶಾಸಕರ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ತೆರವು ಕಾರ್ಯಾಚರಣೆ ವೇಳೆ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಹಾಗೂ ಬಿಜೆಪಿ ಶಾಸಕ ಹರೀಶ್ ಪೂಂಜಾ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಹರೀಶ್ ಪೂಂಜಾ ಅರಣ್ಯಾಧಿಕಾರಿ ಜಯಪ್ರಕಾಶ್‌ಗೆ 'ಲೋಫರ್ ನನ್ ಮಗ' ಅಂತಾ ನಿಂದಿಸಿದ್ದರು ಎಂಬ ಆರೋಪ ಕೇಳಿಬಂದಿದೆ. 

ಅಕ್ಟೋಬರ್ 9 ರಂದು ಈ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಅರಣ್ಯಾಧಿಕಾರಿ ಕೆ.ಕೆ.ಜಯಪ್ರಕಾಶ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು ಶಾಸಕರ ವಿರುದ್ಧ ಐಪಿಸಿ 1860(U/S-143, 353, 504, 149) ಅಡಿ ಪ್ರಕರಣ ಎಫ್ಐಆರ್ ದಾಖಲಾಗಿದೆ. ಸದ್ಯ ಶಾಸಕ ಹರೀಶ್ ಪೂಂಜಾ ಬಂಧನ ಭೀತಿಯಲ್ಲಿದ್ದು, ದ.ಕ ಜಿಲ್ಲೆಯ ‌ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ನಡೆದಿದ್ದ ಘಟನೆ ನಡೆದಿದೆ.

Tap to resize

Latest Videos

ಎಲ್‌ಇಡಿ ಬೀದಿ ದೀಪ ಅಳವಡಿಕೆಯಲ್ಲಿ ಅವ್ಯವಹಾರ: ಚಿಕ್ಕಮಗಳೂರು: ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಎಲ್‌ಇಡಿ ಬಲ್ಪ್‌ಗಳ ಸರಬರಾಜು ವ್ಯವಹಾರದಲ್ಲಿ ಭಾರಿ ಹಣ ದುರುಪಯೋಗವಾಗಿದ್ದು, ಈ ಭ್ರಷ್ಟಾಚಾರದ ಸಮಗ್ರ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಜಮೀಲ್‌ ಅಹಮದ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರು ನಗರದಲ್ಲಿ ಎಲ್ಇಡಿ ಬೀದಿ ದೀಪ ಅಳವಡಿಸಲು 2022ರಲ್ಲಿ ಇ-ಸ್ಮಾರ್ಟ್ ಎನರ್ಜಿ ಸೆಲ್ಯೂಷನ್ ಲಿಮಿಟೆಡ್‌ಗೆ ಅಂದಿನ ಜಿಲ್ಲಾಧಿಕಾರಿ ಟೆಂಡರ್ ನೀಡಿದ್ದಾರೆ ಎಂದು ಹೇಳಿದರು. 

ಪಂಚರಾಜ್ಯ ಚುನಾವಣೆಗಾಗಿ ಹೈಕಮಾಂಡ್‌ ನಯಾಪೈಸೆ ಕೇಳಿಲ್ಲ: ಸಿದ್ದರಾಮಯ್ಯ

ಜಿಲ್ಲೆ ಹಲವು ತಾಲೂಕುಗಳಲ್ಲಿ ಅಳವಡಿಸಿರುವ ಬೀದಿ ವಿದ್ಯುತ್‌ ದೀಪಗಳಿಗೆ 23 ಕೋಟಿ ರು. ಬಿಲ್‌ ಮಾಡಲಾಗಿದೆ. ಯಾವುದೇ ಕಂಪನಿ ಹೆಸರಿಲ್ಲದ ಸಂಪೂರ್ಣ ಕಳಪೆ ಗುಣಮಟ್ಟದ ಬೀದಿ ದೀಪಗಳನ್ನು ಅಳವಡಿಸಲಾಗುತ್ತಿದೆ. ಕಂಪನಿ ಜತೆಗೆ ಟೆಂಡರ್ ನೀಡಿದ ಜಿಲ್ಲಾಧಿಕಾರಿ ವಿರುದ್ಧವೂ ತನಿಖೆ ನಡೆಸಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಆಪ್‌ ಜಿಲ್ಲಾಧ್ಯಕ್ಷ ಲಿಂಗಾರಾಧ್ಯ, ಪ್ರಧಾನ ಕಾರ್ಯದರ್ಶಿ ಈರೇಗೌಡ ಹಾಗೂ ಮುಖಂಡರಾದ ಡಾ. ಸುಂದರೇಗೌಡ ಉಪಸ್ಥಿತರಿದ್ದರು.

click me!