
ಮಂಗಳೂರು(ಸೆ.01): ಬಿಜೆಪಿ ಮುಖಂಡ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 47 ವರ್ಷದ ಮಹಿಳೆ ಅರುಣ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ.
ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆ ಆರೋಪಿಸಿದ್ದಾರೆ. 2023 ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ಅರುಣ್ ಪುತ್ತಿಲ ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಲಾಗಿದೆ. ಅರುಣ್ ಪುತ್ತಿಲ ವಿರುದ್ಧ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಮುಖಂಡ ಅರುಣ್ ಪುತ್ತಿಲ ಅವರದ್ದು ಎನ್ನಲಾದ ರಾಜಕೀಯ ಸಂಬಂಧಿ ಆಡಿಯೋ ವೈರಲ್!
ಅರುಣ್ ಪುತ್ತಿಲ ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಂಡಾಯ ಸ್ಪರ್ಧೆ ಮಾಡಿದ್ದರು. ಬಿಜೆಪಿಗೆ ಠಕ್ಕರ್ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದರು. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಫಿದಾ ಆಗಿ, ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದೀಗ ಮಹಿಳೆಯ ದೂರಿನಡಿ ಅರುಣ್ ಪುತ್ತಿಲ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೆಲ ದಿನಗಳ ಹಿಂದಷ್ಟೇ ಅರುಣ್ ಪುತ್ತಿಲ ಮತ್ತು ಮಹಿಳೆಯೊಬ್ಬರ ಆಡಿಯೋ ಭಾರೀ ವೈರಲ್ ಆಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ