ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಎಫ್‌ಐಆರ್‌!

By Suvarna News  |  First Published Mar 15, 2024, 10:11 AM IST

17 ವರ್ಷದ ಅಪ್ರಾಪ್ತೆಗೆ ಲೈಂಗಿಕ ಕಿರುಕಳ ನೀಡಿರುವ ಆರೋಪದಡಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪೋಕ್ಸೋ ಕಾಯ್ದೆ ಅಡಿ ಎಫ್ ಐ ಆರ್ ದಾಖಲು ಮಾಡಲಾಗಿದೆ.  


ಬೆಂಗಳೂರು (ಮಾ.15): ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಪೋಕ್ಸೋ ಕಾಯ್ದೆ ಅಡಿ ದೂರು ದಾಖಲಾಗಿದೆ.  ಅಪ್ರಾಪ್ತೆಯ ತಾಯಿ ದೂರಿನ ಮೇರೆಗೆ ಮಾಜಿ ಸಿಎಂ ಬಿ‌.ಎಸ್.ಯಡಿಯೂರಪ್ಪ ವಿರುದ್ದ  ಎಫ್ ಐ ಆರ್ ದಾಖಲು ಮಾಡಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಗೆ ಅಪ್ರಾಪ್ತೆಯ ತಾಯಿ ದೂರು ನೀಡಿದ್ದಳು. ಈಗ ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(a) ಅಡಿ ಪ್ರಕರಣ ದಾಖಲಾಗಿದೆ. 

17 ವರ್ಷದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಕಳೆದ ರಾತ್ರಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕಳೆದ ಫೆಬ್ರುವರಿ 2ರಂದು ಸಹಾಯ ಕೇಳಲು ಹೋಗಿದ್ದ ವೇಳೆ  ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಎಫ್ಐಆರ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

Latest Videos

undefined

'ಇಂಡಿಯಾ' ಕೂಟ ಗೆದ್ದರೆ ರೈತರ ಸಾಲ ಮನ್ನಾ ಜತೆಗೆ ಹಲವು ಗ್ಯಾರಂಟಿ ಘೋಷಿಸಿದ ರಾಹುಲ್‌ ಗಾಂಧಿ

ಅಪ್ರಾಪ್ತೆಯ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯಯಾಚಿಸಲು ತೆರಳಿದ್ದಾಗ ಘಟನೆ ನಡೆದಿದೆ. 9 ನಿಮಿಷಗಳ ಕಾಲ ಮೊದಲು ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ. ಅನಂತರ ಅಪ್ರಾಪ್ತೆಯನ್ನು ರೂಂ ಒಳಗೆ ಕರೆದು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಅಪ್ರಾಪ್ತೆಯ ಖಾಸಗಿ ಭಾಗ ಮುಟ್ಟಿರುವ ಬಗ್ಗೆ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ರೂಂ ನಿಂದ ಹೊರ ಬಂದು ಯಡಿಯೂರಪ್ಪ ಅವರು ಕ್ಷಮೆಯಾಚಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ವಿಚಾರವನ್ನ ಯಾರಿಗೂ ಹೇಳಬಾರದೆಂದು ಹೆದರಿಸಿ ನಮ್ಮನ್ನ ತಡೆದಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.

Lok Sabha Election 2024: ಮತ್ತೊಂದು ಚುನಾವಣಾ ಸಮೀಕ್ಷೆ, ಎನ್‌ಡಿಎಗೆ 411, ಇಂಡಿಯಾಗೆ 105, ಕರ್ನಾಟಕದಲ್ಲಿ ಎಷ್ಟು?

ಇನ್ನು ದೂರುದಾರ ಮಹಿಳೆ ಕಳೆದ 2015 ರಿಂದಲೂ ಈ ವರೆಗೂ 53 ಕೇಸ್ ದಾಖಲಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ದವು ದೂರು ನೀಡಿದ್ದಾರೆ. ರಾಜಕಾರಣಿಗಳ ವಿರುದ್ದ ಕೂಡ ಈ ಹಿಂದೆ ಮಹಿಳೆ ದೂರು ನೀಡಿದ್ದಾರೆ. ಗಂಡನ ಹಾಗು ಮಗನ ವಿರುದ್ದ , ರೌಡಿಶೀಟರ್ ಗಳ ಮೇಲೆ ದೂರು ದಾಖಲಿಸಿದ್ದಾರೆ. 2015 ರಲ್ಲಿ ಮಗಳ ವಿರುದ್ದ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಗಂಡನ ಸಂಬಂಧಿಯೊಬ್ಬನ ವಿರುದ್ದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಗೃಹ ಸಚಿವ ಪ್ರತಿಕ್ರಿಯೆ:
ಯಡಿಯೂರಪ್ಪ ವಿರುದ್ಧದ ಪೊಕ್ಸೋ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಹೇಳಿಕೆ ನೀಡಿದ್ದು, ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಅದನ್ನು ಪರಿಶೀಲಿಸಿ ಕೇಸ್ ರಿಜಿಸ್ಟರ್ ಮಾಡಿದ್ದಾರೆ. ಪೊಲೀಸರು ಅದರ ಬಗ್ಗೆ ತನಿಖೆ ಮಾಡ್ತಿದ್ದಾರೆ. ತನಿಖೆ ಆಗುವ ವರೆಗೂ ಯಾವುದೇ ವಿಷಯ ತಿಳಿಸೋಕೆ ಆಗಲ್ಲ. ಇದು ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದ್ದು. ಇದು ಬಹಳ ಸೂಕ್ಷ್ಮ ವಿಷಯ,  ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡ್ತೀವಿ. ವಶಕ್ಕೆ ಸಂಬಂಧಿಸಿದಂತೆ ತನಿಖೆಯ ಮೇಲೆ ನಿರ್ಧಾರ. ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ಅವರು ಯಾರೋ ಮಹಿಳೆ ದೂರು ಕೊಟ್ಟಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡ್ತಿದ್ದಾರೆ. ಇದರ ಬಗ್ಗೆ ಡಿಸಿಎಂ, ಸಿಎಂ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಗಳು ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು.

ಆ ಮಹಿಳೆ ಮಾನಸಿಕ ಅಸ್ವಸ್ಥತರು ಅಂತಾ ಹೇಳ್ತಾರೆ. ಅವರು ದೂರನ್ನು ಟೈಪ್ ಮಾಡಿ ಕೊಟ್ಟಿದ್ದಾರೆ. ಆದರೆ ಕೈಯಿಂದ ಬರೆದು ದೂರು ಕೊಟ್ಟಿದ್ದಲ್ಲ. ಟೈಪ್ ಕಾಪಿ ಕೊಟ್ಟಿದ್ದಾರೆ ಎಂದು ಅಧಿಕಾರಿಗಳು ನನಗೆ ಹೇಳಿದ್ದಾರೆ. ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸೇರಿದ್ದಂತದ್ದು. ಯಾವುದೇ ವಿಷಯ ಆದರೂ ಬಹಳ ಎಚ್ಚರಿಕೆಯಿಂದ ಹೇಳಬೇಕಾಗುತ್ತದೆ. ಹೆಚ್ಚು ಮಾಹಿತಿ ತಗೆದುಕೊಳ್ಳುವವರೆಗೂ ಏನೂ ಬಹಿರಂಗ ಮಾಡೋಕೆ ಆಗಲ್ಲ ಎಂದಿದ್ದಾರೆ.

click me!