
ಬೆಳಗಾವಿ(ಮಾ.15): ಫೇಸ್‌ಬುಕ್ ಹಾಗೂ ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಉದ್ರೇಕ ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದಡಿ ನಾಲ್ಕು ಜನರ ವಿರುದ್ಧ ಪ್ರತ್ಯೇಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಕೆಲವು ದಿನಗಳಿಂದ ಮಹಾರಾಷ್ಟ್ರ ರಾಜ್ಯ ಬೆಳಗಾವಿ ಗಡಿಯಲ್ಲಿ ಸಂಘರ್ಷ ಎದ್ದಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಉದ್ರೇಕಕಾರಿ ಮತ್ತು ಪ್ರಚೋದನೆ ನೀಡುವ ಪೋಸ್ಟ್ ಮಾಡಿದ ಫೇಸ್‌ಬುಕ್ ಮತ್ತು ವಾಟ್ಸಾಪ್ ಅಡ್ಮಿನ್‌ಗಳ ವಿರುದ್ಧ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನ ದಾಖಲಿಸಿದೆ.
2ನೇ ದಿನವೂ ಬಸ್ ಸಂಚಾರ ಸ್ಥಗಿತ: ಪ್ರಯಾಣಿಕರ ಪರದಾಟ
ಬೆಳಗಾವಿ ನಗರದ ಮಾರ್ಕೆಟ್ ಠಾಣೆ, ಟಿಳಕವಾಡಿ ಠಾಣೆ, ಗ್ರಾಮೀಣ ಠಾಣೆ ಮತ್ತು ಶಹಪುರ ಠಾಣೆಯಲ್ಲಿ ಒಟ್ಟು ನಾಲ್ಕು ಪ್ರಕರಣ ದಾಖಲಾಗಿವೆ. ಸಮಾಜದ ಸ್ವಾಸ್ಥ್ಯ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣದ ಗ್ರೂಪ್‌ಗಳಲ್ಲಿ ಈ ರೀತಿಯ ಪೋಸ್ಟ್ ಮತ್ತು ವರ್ತನೆಗಳು ಕಂಡು ಬಂದಲ್ಲಿ ಅದರ ಅಡ್ಮಿನ್ ಮತ್ತು ಗ್ರೂಪ್ ಸದಸ್ಯರನ್ನೇ ಹೊಣೆಗಾರರನ್ನಾಗಿ ಮಾಡಲು ಪೊಲೀಸ್ ನಿರ್ಧರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ