ಬೆಂಗಳೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ, ಸರ್ಕಾರಿ ಅಧಿಕಾರಿ ವಿರುದ್ಧ ಎಫ್‌ಐಆರ್‌

Published : Jul 01, 2023, 09:19 AM IST
ಬೆಂಗಳೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ, ಸರ್ಕಾರಿ ಅಧಿಕಾರಿ ವಿರುದ್ಧ ಎಫ್‌ಐಆರ್‌

ಸಾರಾಂಶ

ಕಚೇರಿಯಲ್ಲಿ ಕೆಲಸ ಮಾಡುವ ಮಹಿಳೆಗೆ ಕಳೆದ ಆರು ತಿಂಗಳಿಂದ ನಾರಾಯಣಸ್ವಾಮಿ ಕಿರುಕುಳ ಕೊಡುತ್ತಿದ್ದರು ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ರು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು‌ ನೀಡುತ್ತಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ ಸಂತ್ರಸ್ತ ಮಹಿಳೆ. 

ಬೆಂಗಳೂರು(ಜು.01):  ಸರ್ಕಾರಿ ಅಭಿಯೋಜನಾ ಅಧಿಕಾರಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿ ಬಂದಿದೆ. ಹೌದು, ಅಭಿಯೋಜನಾ ಇಲಾಖೆಯ ಎಓ ನಾರಾಯಣಸ್ವಾಮಿ ಎಂಬುವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಿಸಲಾಗಿದೆ. ಈ ಸಂಬಂಧ ನಾರಾಯಣಸ್ವಾಮಿ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. 

ಕಚೇರಿಯಲ್ಲಿ ಕೆಲಸ ಮಾಡುವ ಮಹಿಳೆಗೆ ಲೈಂಗಿಕ‌ ದೌರ್ಜನ್ಯ ಎಸಗಿದ ಆರೋಪದ ಮೇಲೆ ನಾರಾಯಣಸ್ವಾಮಿ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ 354(A) ಹಾಗೂ 506 ಕಾಯ್ದೆಯಡಿ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. 

ಬೆಂಗಳೂರು: ವಿಮಾನದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟ ಪಿಆರ್‌ಓ ಸೆರೆ

ಕಚೇರಿಯಲ್ಲಿ ಕೆಲಸ ಮಾಡುವ ಮಹಿಳೆಗೆ ಕಳೆದ ಆರು ತಿಂಗಳಿಂದ ನಾರಾಯಣಸ್ವಾಮಿ ಕಿರುಕುಳ ಕೊಡುತ್ತಿದ್ದರು ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ರು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು‌ ನೀಡುತ್ತಿರುವುದಾಗಿ ಸಂತ್ರಸ್ತ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.  ಸದ್ಯ ಆರೋಪಿ ನಾರಾಯಾಣಸ್ವಾಮಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ