
ಬೆಳಗಾವಿ (ಜ.11): ಕ್ಷುಲ್ಲಕ ಕಾರಣಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹಲ್ಯಾಳ ರಸ್ತೆಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹಲ್ಯಾಳ ರಸ್ತೆಯಲ್ಲಿ ಇಮ್ತಿಯಾಜ್ ಚಿಂಚಲಿ ಎಂಬ ವ್ಯಾಪಾರಿ ತನ್ನ ಅಂಗಡಿಯ ಮುಂದೆ ಸಾರ್ವಜನಿಕ ರಸ್ತೆಯಲ್ಲಿ ಯಾರೂ ಬೈಕ್ ಪಾರ್ಕ್ ಮಾಡಬಾರದು ಎಂಬ ಉದ್ದೇಶದಿಂದ ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದನು. ಇದನ್ನು ಗಮನಿಸಿದ ಸಾರ್ವಜನಿಕರು, 'ಸಾರ್ವಜನಿಕ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಲು ನಿಮಗೆ ಯಾರು ಅಧಿಕಾರ ಕೊಟ್ಟಿದ್ದಾರೆ?' ಎಂದು ಪ್ರಶ್ನಿಸಿದ್ದಾರೆ. ಈ ಕ್ಷುಲ್ಲಕ ಕಾರಣಕ್ಕೆ ವ್ಯಾಪಾರಿ ಮತ್ತು ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದಿದೆ.
ಸಾರ್ವಜನಿಕರು ಪ್ರಶ್ನೆ ಮಾಡಿದ ವೇಳೆ ಉದ್ಧಟತನ ಪ್ರದರ್ಶಿಸಿದ ಇಮ್ತಿಯಾಜ್ ಚಿಂಚಲಿ, ನೇರವಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಎಳೆದು ತಂದಿದ್ದಾನೆ. 'ನಿನಗೆ ದಮ್ಮಿದ್ದರೆ ಹೋಗಿ ಮೋದಿಗೆ ಹೇಳು' ಎನ್ನುತ್ತಾ ಪ್ರಧಾನಿ ಮೋದಿಯವರ ವಿರುದ್ಧ ಅತ್ಯಂತ ಕೆಟ್ಟ ಪದಗಳನ್ನು ಬಳಸಿ ಸಾರ್ವಜನಿಕರ ಮುಂದೆಯೇ ನಿಂದಿಸಿದ್ದಾನೆ. ಈ ಇಡೀ ಘಟನೆಯನ್ನು ಅಲ್ಲಿರುವವರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.
ನೆಟ್ಟಿಗರ ಆಕ್ರೋಶ, ವ್ಯಕ್ತಿಯ ವಿರುದ್ಧ ಪೊಲೀಸ್ ದೂರು
ದೇಶದ ಪ್ರಧಾನಿಯವರನ್ನು ಸಾರ್ವಜನಿಕವಾಗಿ ನಿಂದಿಸಿರುವ ವ್ಯಕ್ತಿಯ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 'ದೇಶದ ಪ್ರಧಾನಿಗೆ ಕನಿಷ್ಠ ಗೌರವ ನೀಡದ ಇಂತಹ ವ್ಯಕ್ತಿಯ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು' ಒತ್ತಾಯಿಸಿದ್ದಾರೆ. ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಅಥಣಿ ಪಟ್ಟಣದ ಬಿಜೆಪಿ ಮುಖಂಡರು ಇಮ್ತಿಯಾಜ್ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಅಥಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಡಿಯೋ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ