ಸಚಿವ ಗುಂಡೂರಾವ್ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಕರೆದು ಕಾನೂನು ಕ್ರಮಕ್ಕೆ ಸೂಚಿಸಿದ್ದರು . ಗುಂಡೂರಾವ್ ಸೂಚನೆ ಬೆನ್ನಲ್ಲೇ ಶರಣ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶರಣ್ ಪಂಪ್‌ವೆಲ್ ಹಾಗೂ ಇತರರು ಎಂದು ಕೆಲ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಭರತ್ ರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ಮಂಗಳೂರು
ಮಂಗಳೂರು(ಅ.18): ಮಂಗಳಾದೇವಿ ದೇವಸ್ಥಾನದಲ್ಲಿ ವ್ಯಾಪಾರ ಧರ್ಮ ದಂಗಲ್ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ಜೊತೆ ವ್ಯಾಪಾರ ಮಾಡದಂತೆ ಕರೆ ಕೊಟ್ಟ ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದು(ಬುಧವಾರ) ಬೆಳಿಗ್ಗೆ ಸಮಾನ ಮನಸ್ಕ ಸಂಘಟನೆಗಳು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ಬೆನ್ನಲ್ಲೇ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್, ಮಂಗಳಾದೇವಿಯ ಹಿಂದೂಗಳ ಸ್ಟಾಲ್ ಗಳಿಗೆ ಭಗವಾಧ್ಬಜ ಕಟ್ಟಿದ್ದರು. ಹಿಂದೂಗಳು ಭಗವಾಧ್ಬಜ ಇದ್ದ ಸ್ಟಾಲ್ ಗಳಲ್ಲೇ ವ್ಯಾಪಾರ ನಡೆಸಬೇಕು ಎಂದು ಶರಣ್ ಕರೆ ಕೊಟ್ಟಿದ್ದರು. ಇದೀಗ ಪಾಂಡೇಶ್ವರ ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದ್ದು, ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಫುಟ್ ಪಾತ್ ಮೇಲೆ ಕಾರು ಹತ್ತಿಸಿ ಹಿಟ್ ಆಂಡ್ ರನ್‌ಗೆ ಯುವತಿ ಬಲಿ: ಭಯಾನಕ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ
ಅ.16ರಂದು ಮಂಗಳಾದೇವಿಯ ರಥಬೀದಿಯ ಹಿಂದೂಗಳ ಸ್ಟಾಲ್ ಗಳಿಗೆ ಭಗವಾಧ್ಬಜ ಕಟ್ಟಿದ್ದ ವಿಎಚ್ ಪಿ ಮುಖಂಡ ಶರಣ್, ಹಿಂದೂಗಳ ಸ್ಟಾಲ್ ಗಳಲ್ಲೇ ವ್ಯಾಪಾರ ಮಾಡಿ ಅಂತ ಬಹಿರಂಗ ಕರೆ ಕೊಟ್ಟಿದ್ದರು. ಇಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿಯಾಗಿದ್ದ ಸಮಾನ ಮನಸ್ಕ ಸಂಘಟನೆಗಳು, ಜಾತ್ರಾ ವ್ಯಾಪಾರಸ್ಥರು, ಬೀದಿ ವ್ಯಾಪಾರಿಗಳು ಹಾಗೂ ಡಿವೈಎಫ್ಐ, ಎಡಪಂಥೀಯ ಸಂಘಟನೆಗಳ ನಿಯೋಗ ಈ ಬಗ್ಗೆ ಅಸಮಾಧಾನ ಹೊರ ಹಾಕಿತ್ತು.
ಸಚಿವ ದಿನೇಶ್ ಗುಂಡೂರಾವ್ ಎದುರು ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅಸಮಾಧಾನ ವ್ಯಕ್ತಪಡಿಸಿದ್ದರು. ಶರಣ್ ಪಂಪ್ ವೆಲ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲು ಆಗ್ರಹಿಸಿದ್ದರು. ಆ ಬಳಿಕ ಸಚಿವ ಗುಂಡೂರಾವ್ ಅವರು ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಕರೆದು ಕಾನೂನು ಕ್ರಮಕ್ಕೆ ಸೂಚಿಸಿದ್ದರು . ಗುಂಡೂರಾವ್ ಸೂಚನೆ ಬೆನ್ನಲ್ಲೇ ಶರಣ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶರಣ್ ಪಂಪ್‌ವೆಲ್ ಹಾಗೂ ಇತರರು ಎಂದು ಕೆಲ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹಿಂದೂ ನಾಯಕರನ್ನು ದಮನಿಸಲು ಯತ್ನಿಸಿದರೆ ತಕ್ಕ ಉತ್ತರ: ಭಜರಂಗದಳ
ಹಿಂದೂ ವ್ಯಾಪಾರಿಗಳ ಬೆಂಬಲಕ್ಕೆ ನಿಂತ ಶರಣ್ ಪಂಪುವೆಲ್ ಮೇಲೆ ಕೇಸು ದಾಖಲಿಸಿದ್ದನ್ನು ಬಜರಂಗದಳ ಖಂಡಿಸಿದೆ. ಮಂಗಳಾದೇವಿ ದೇವಸ್ಥಾನದಲ್ಲಿ ಹಿಂದುಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡಬೇಕು ಮತ್ತು ದತ್ತಿಇಲಾಖೆಯ ಕಾನೂನಿನ ಪ್ರಕಾರ ದೇವಸ್ಥಾನದ ವಠಾರ ಮತ್ತು ರಥಬೀದಿಯಲ್ಲಿ ಹಿಂದುಯೇತರರಿಗೆ ಅವಕಾಶವಿಲ್ಲ. ಹಾಗಾಗಿ ಹಿಂದೂ ವ್ಯಾಪಾರಸ್ಥರ ಬೆಂಬಲಕ್ಕೆ ನಿಂತ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಮೇಲೆ ಮುಸ್ಲಿಮರ ಓಲೈಕೆಗೆ ಕೇಸು ದಾಖಲಿಸಿದ ಕಾಂಗ್ರೆಸ್ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ತಕ್ಷಣ ಹಾಕಿರುವ ಸುಳ್ಳುಕೇಸನ್ನು ಹಿಂದೆ ಪಡೆಯಬೇಕು. ಹಿಂದೂ ಸಂಘಟನೆಯ ನಾಯಕರನ್ನು ದಮನಿಸಲು ಪ್ರಯತ್ನಿಸಿದರೆ ತಕ್ಕ ಉತ್ತರ ಕೊಡಲಾಗುವುದು ಎಂದು ಭಜರಂಗದಳ ವಿಭಾಗ ಸಹಸಂಯೋಜಕ ಪುನೀತ್ ಅತ್ತಾವರ ತಿಳಿಸಿದ್ದಾರೆ.