
ಬೆಂಗಳೂರು (ಏ.25): ಕರ್ನಾಟಕ ವಿಧಾನ ಸಭೆ ಚುನಾವಣೆ ಕಾವು ಜೋರಾಗಿದೆ. ಚುನಾವಣಾ ಪ್ರಚಾರದ ನಡುವೆ ಹೆಬ್ಬಾಳ ಅಭ್ಯರ್ಥಿಯ ವಿರುದ್ದ FIR ದಾಖಲಾಗಿದೆ. ಹೆಬ್ಬಾಳ ಬಿಜೆಪಿ ಅಭ್ಯರ್ಥಿ ಕಟ್ಟಾ ಜಗದೀಶ್ ನಾಯ್ಡು ವಿರುದ್ದ FIR ದಾಖಲಾಗಿದೆ. ಮಹಿಳೆಯೊಬ್ಬರಿಗೆ ಬಿಜೆಪಿ ಸೇರಿ, ಬಿಜೆಪಿ ಪರವಾಗಿ ಪ್ರಚಾರ ಮಾಡುವಂತೆ ಒತ್ತಾಯಿಸಲಾಗಿದೆ. ಒಂದು ವೇಳೆ ಬಿಜೆಪಿ ಪರವಾಗಿ ಪ್ರಚಾರ ಮಾಡದಿದ್ರೆ ಕೊಲ್ಲುವ ಬೇದರಿಕೆ ಹಾಕಿದ್ದಾರೆಂದು ಆರೋಪಿಸಿ ದೂರು ದಾಖಲಾಗಿದೆ.
ಈ ಸಂಬಂಧ ದೂರು ಹೆಚ್ಎಂಟಿ ಲೇಔಟ್ ನಿವಾಸಿ ರಾಣಿ ವೆಂಕಟರಮಣ ಎಂಬ ಮಹಿಳೆ ಹೆಬ್ಬಾಳ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮನೆಗೆ ನುಗ್ಗಿ ಬಿಜೆಪಿ ಪರ ಪ್ರಚಾರ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಬಿಜೆಪಿ ಪರ ಪ್ರಚಾರ ಮಾಡದಿದ್ರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಪುತ್ರ ಕಟ್ಟಾ ಜಗದೀಶ್ ನಾಯ್ಡು, ಅಭಯರಾಜು ಹಾಗೂ ಪುನೀತ್ ಎಂಬುವವರ ಮೇಲೆ ದೂರು ದಾಖಲು ಮಾಡಲಾಗಿದ್ದು, ಎಫ್‌ಐಆರ್ ಆಗಿದೆ.
ದೇವೇಗೌಡರಿಗೆ ನನ್ನ ದೇಹದ ಮೇಲಾದ ಪರಿಣಾಮದ ಬಗ್ಗೆ ಆತಂಕ ಇದೆ: ಹೆಚ್‌ಡಿಕೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.
ಊಟದ ವಿಚಾರದಲ್ಲಿ ಹೆಚ್‌ಡಿಕೆ ಮಕ್ಕಳ ರೀತಿ ಹಠ ಮಾಡ್ತಾರೆ, ಬರೀ ಮೊಸರನ್ನ ತಿಂತಾರೆ: ಅನಿತಾ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ