ರೈತನ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ದ ಎಫ್​ಐಆರ್

Published : Nov 08, 2024, 11:16 AM IST
ರೈತನ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ದ ಎಫ್​ಐಆರ್

ಸಾರಾಂಶ

ವಕ್ಫ್ ಆಸ್ತಿ ಅಂತ ಪಹಣಿಯಲ್ಲಿ ನಮೂದಾದ ಹಿನ್ನಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. 

ಹಾವೇರಿ (ನ.08): ವಕ್ಫ್ ಆಸ್ತಿ ಅಂತ ಪಹಣಿಯಲ್ಲಿ ನಮೂದಾದ ಹಿನ್ನಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ, ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ವಕ್ಫ್ ನೋಟಿಸ್ ಬಂದಿದ್ದೇ ಆತ್ಮಹತ್ಯೆಗೆ ಕಾರಣ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. 

ಹರನಗೇರಿ ರೈತ‌ ರುದ್ರಪ್ಪ ಆತ್ಮಹತ್ಯೆ ಬಗ್ಗೆ ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ, ವಕ್ಫ್​​ ನೋಟಿಸ್​ಗೆ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದರು. ಇನ್ನು ಹಾನಗಲ್ ತಾಲೂಕು ಹರನಗೇರಿ ಗ್ರಾಮದ ರುದ್ರಪ್ಪ ಎಂಬ ರೈತ ಆತ್ಮಹತ್ಯೆಗೆ ಶರಣಾಗಿದ್ದ. 2022ರಲ್ಲಿ ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಪ್ರಕರಣ ದಾಖಲಾಗಿತ್ತು. ಆದರೆ ವಕ್ಪ್ ಅಂತ ಪಹಣಿಯಲ್ಲಿ ನಮೂದಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದ. ವಕ್ಪ್ ಬೋರ್ಡ್ ನಿಂದ ಅನ್ಯಾಯ ಆಗಿದೆ ಎಂದು ಕುಟುಂಬಸ್ಥರು ದೂರಿದ್ದರು. 

ವಕ್ಫ್ ವಿವಾದ ಬಗ್ಗೆ ಲೋಕಸಭಾ ಸ್ಪೀಕರ್‌ಗೆ ವರದಿ ಸಲ್ಲಿಕೆ: ಜಗದಂಬಿಕಾ ಪಾಲ್‌

ನಿನ್ನೆ ಹುಬ್ಬಳ್ಳಿಯಲ್ಲಿ ಮೃತ ರುದ್ರಪ್ಪ ಕುಟುಂಬಸ್ಥರು ಕೇಂದ್ರ ವಕ್ಪ್ ಕಾಯಿದೆ ತಿದ್ದುಪಡಿ ಜಂಟಿ ಸದನ ಸಮಿತಿಗೆ ಮನವಿ ಸಲ್ಲಿಸಿದ್ದರು.  ಇದು ಪಹಣಿಯಲ್ಲಿ ‌ವಕ್ಪ್ ಎಂದು ಸೇರಿಸಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಸುದ್ದಿ ಆಗಿತ್ತು. ಈ ಬಗ್ಗೆ ಸ್ಪಷ್ಟೀಕರಣ ನೀಡಿರುವ ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ, ಸಾಲ ಬಾಧೆಯಿಂದ ರುದ್ರಪ್ಪ ಆತ್ಮಹತ್ಯೆ ಎಂದು ಪ್ರಕರಣ ದಾಖಲಾಗಿದೆ. ಪಹಣಿಯಲ್ಲಿ ವಕ್ಪ್ ಅಂತ ಸೇರಿಸದ್ದರಿಂದ ಆತ್ಮಹತ್ಯೆ ಎಂದು ಪ್ರಕರಣ ದಾಖಲಾಗಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ