ಬೆಂಗಳೂರು: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್..!

By Girish Goudar  |  First Published Jul 9, 2024, 10:06 AM IST

ಜುಲೈ‌ 6 ರಂದು 1.20 ವರೆಗೆ ಪಬ್ ಓಪನ್ ಇತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರೋದಾಗಿ ಮಾಹಿತಿ ಲಭ್ಯವಾಗಿತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಗ್ರಾಹಕರಿದ್ದರು. ಅವಧಿಗೂ ಮೀರಿ ಅನಧಿಕೃತವಾಗಿ ಪಬ್ ಓಪನ್ ಮಾಡಿದ ಹಿನ್ನಲೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.   


ಬೆಂಗಳೂರು(ಜು.09):  ಭಾರತ ಕ್ರಿಕೆಟ್‌ ತಂಡದ ಆಟಗಾರ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್ ದಾಖಲಾಗಿದೆ. ಹೌದು, ಕಸ್ತೂರಬಾ ರಸ್ತೆಯಲ್ಲಿರುವ  ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ಮೇಲೆ ಎಫ್ಐಆರ್ ದಾಖಲಾಗಿದೆ. 

ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ. ಜುಲೈ‌ 6 ರಂದು 1.20 ವರೆಗೆ ಪಬ್ ಓಪನ್ ಇತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರೋದಾಗಿ ಮಾಹಿತಿ ಲಭ್ಯವಾಗಿತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಗ್ರಾಹಕರಿದ್ದರು. 

Tap to resize

Latest Videos

ರೇಣುಕಾಸ್ವಾಮಿ ಕೊಲೆ ಕೇಸ್‌: ಸಾಕ್ಷ್ಯ ಸಂಗ್ರಹ ಬಳಿಕ ನಟ ದರ್ಶನ್ ಕೇಸಲ್ಲಿ ಚಾರ್ಜ್‌ಶೀಟ್‌, ಪರಂ

ಅವಧಿಗೂ ಮೀರಿ ಅನಧಿಕೃತವಾಗಿ ಪಬ್ ಓಪನ್ ಮಾಡಿದ ಹಿನ್ನಲೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.   ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 

click me!