ಸಲಿಂಗ ಕಾಮ ಆರೋಪ: ಸೂರಜ್ ರೇವಣ್ಣ ವಿರುದ್ದ ಎಫ್ಐಆರ್ ದಾಖಲು!

By Govindaraj S  |  First Published Jun 22, 2024, 11:25 PM IST

ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಎಫ್ಐಆರ್ ಕೇಸ್ ದಾಖಲಾಗಿದೆ. 
 


ಹಾಸನ (ಜೂ.22): ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಎಫ್ಐಆರ್ ಕೇಸ್ ದಾಖಲಾಗಿದೆ. ಸಂತ್ರಸ್ತ ನೀಡಿದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ ) ಹಾಗೂ 506 ( ಬೆದರಿಕೆ) ಯಡಿ ಸಿ.ಆರ್‌ ನಂ. 92/2024  ರಲ್ಲಿ ಕೇಸ್ ದಾಖಲು ಮಾಡಲಾಗಿದೆ. ಶುಕ್ರವಾರ ಡಿಜಿ ಕಛೇರಿಯಲ್ಲಿ ಸಂತ್ರಸ್ತ ದೂರು ನೀಡಿದ್ದ. ಅಲ್ಲದೇ ಹಾಸನ ಎಸ್‌ಪಿಗೂ ದೂರಿನ ಪ್ರತಿ ಮೇಲ್ ಮಾಡಿದ್ದ. ಇದೀಗ ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

ಈ ಕೇಸ್‌ಗೆ ಸಂಬಂಧಪಟ್ಟಂತೆ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾರ್ ತನಿಖಾಧಿಕಾರಿಯಾಗಿ ನೇಮಕವಾಗಿದ್ದು, ಇಲ್ಲಿಯವರೆಗೆ ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಪ್ರಕರಣದ ವಿಚಾರಣೆಯನ್ನು ಹೊಳೆನರಸೀಪುರ ನಗರ ಪೊಲೀಸರು ನಡೆಸಿದ್ದಾರೆ. ಸದ್ಯ ಹೊಳೆನರಸೀಪುರ ನಗರ ಸಿಪಿಐ ಪ್ರದೀಪ್ ಕುಮಾರ್‌ರಿಂದ ವಿಚಾರಣೆ ಅಂತ್ಯವಾಗಿದೆ. ದಾಖಲಾಗಿರೋ‌ ಪ್ರಕರಣದ ತನಿಖೆಯನ್ನು ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾರ್ ನಡೆಸಲಿದ್ದು, ವಿಚಾರಣೆ ನಂತರ ಸೂರಜ್ ಪೊಲೀಸರು ವಶಕ್ಕೆ ಪಡೆಯೋ ಸಾಧ್ಯತೆಯಿದೆ.

Latest Videos

undefined

ಸಿದ್ದರಾಮಯ್ಯ ಸರ್ಕಾರ ಬೆಲೆ ಏರಿಕೆ ಸಮರ್ಥಿಸಿಕೊಳ್ಳುವುದು ನಾಚಿಕೆಗೇಡು: ಮಾಜಿ ಸಚಿವ ಎನ್.ಮಹೇಶ್

ಸಂತ್ರಸ್ತನ ದೂರೇನು?: ಸೂರಜ್ ರೇವಣ್ಣ ನನಗೆ ಚುನಾವಣೆ ಸಂದರ್ಭದಲ್ಲಿ ಪರಿಚಯವಾಗಿದ್ರು. ನಾನು ಅವರ ತಮ್ಮ ಪ್ರಜ್ವಲ್ ರೇವಣ್ಣ ಪರ ಕೆಲಸ ಮಾಡಿದ್ದೇನೆ. ಆ ಸಂದರ್ಭ ನನ್ನ ನಂಬರ್‌ನ ಸೂರಜ್ ತೆಗೆದುಕೊಂಡಿದ್ದರು. ಜೂ.14 ರಂದು ಸೂರಜ್ ನನಗೆ ಮೆಸೇಜ್ ಮಾಡಿದ್ದರು. ಮೆಸೇಜ್‍ನಲ್ಲಿ ನನ್ನ ಬಗ್ಗೆ ಎಲ್ಲಾ ಮಾಹಿತಿ ಪಡೆದಿದ್ದರು. ನಂತರ ಜೂ.16 ರಂದು ಹೊಳೆನರಸೀಪುರ ತಾಲೂಕಿನ, ಗನ್ನೀಕಡ ತೋಟಕ್ಕೆ ಸಂಜೆ ಬರಲು ಹೇಳಿದ್ದರು. ನಾನು ಹೋದ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದರು. ನನಗೆ ಇಷ್ಟವಿಲ್ಲದಿದ್ದರೂ ಲೈಂಗಿಕ ಕಿರುಕುಳ ನೀಡಿದ್ದಾರೆ. ಆ ಸಂದರ್ಭ ನನಗೆ ಪುರುಷರನ್ನು ಕಂಡರೆ ಆಸಕ್ತಿ ಮಹಿಳೆಯರನ್ನು ಕಂಡರೆ ಆಸಕ್ತಿ ಇಲ್ಲ ಎಂದು ಹೇಳಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ.

click me!