
ಬೆಂಗಳೂರು (ಆ.18): ಫೇಸ್‌ಬುಕ್‌ನಲ್ಲಿ ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಗಲಭೆ ಮುಂದಿಟ್ಟು ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಮೇಲೆ ಹಲಸೂರು ಗೇಟ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಮೇಘನಾ ರಾಜ್ ಭೇಟಿ ಮಾಡಿ ಸಾಂತ್ವನ ಹೇಳಿದ ಪ್ರಥಮ್, ಸಿದ್ದು ಸೊಸೆ
ಗಲಭೆಯ ಆರೋಪಿಗಳ ಕುಟುಂಬದ ಸದಸ್ಯರು ಹೇಳಿಕೆಯನ್ನು ತಪ್ಪಾಗಿ ಉಲ್ಲೇಖಿಸಿ ಫೇಸ್‌ಬುಕ್‌ನಲ್ಲಿ ಪ್ರಥಮ್ ಪೋಸ್ಟ್ ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಎಸ್‌ಡಿಪಿಐ ಬೆಂಗಳೂರು ಜಿಲ್ಲಾ ಸಮಿತಿ ಸದಸ್ಯ ಉಮರ್ ಫಾರೂಕ್ ನೀಡಿದ ದೂರು ನೀಡಿದ್ದರು.
ಎಂದೂ ಹುಟ್ಟುಹಬ್ಬ ಆಚರಿಸದ ಹಿರಿಯ ನಟನಿಂದ ಕೇಕ್ ಕಟ್ ಮಾಡಿಸಿದ ಪ್ರಥಮ್!
ಅದರನ್ವಯ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಸೇರಿದಂತೆ ಇನ್ನಿತರ ಪರಿಚ್ಛೇದಗಳಡಿ ಪ್ರಥಮ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಚಾರಣೆಗೆ ಬರುವಂತೆ ಆರೋಪಿಗೆ ಶೀಘ್ರವೇ ನೋಟಿಸ್ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ