
ಶಿವಮೊಗ್ಗ (ಅ.21): ಅಗ್ನಿ ಅವಘಡದಿಂದ ದ್ವಿಚಕ್ರ ವಾಹನ ಶೋ ರೂಂ ಬೆಂಕಿಯಿಂದ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಎನ್‌ಟಿ ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್ ಮೋಟರ್ಸ್ ನಲ್ಲಿ ನಡೆದಿದೆ.
ಶೋ ರೂಂನಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಂದಿಸುವ ಹೊತ್ತಿಗೆ ಇಡೀ ಶೋರೂಂ ದಟ್ಟ ಹೊಗೆಯಿಂದ ಆವರಿಸಿದೆ. ಈ ಘಟನೆಯಿಂದಾಗಿ ಶೂಂ ನಲ್ಲಿನ ದೊಡ್ಡ ಮಟ್ಟದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಒಳಾಂಗಣ ವಿನ್ಯಾಸ, ಕೆಲವು ವಾಹನಗಳು, ಎಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿಯಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಅಜ್ಜಿಯನ್ನ ಕೊಂದು ಆಕೆಯ ರಕ್ತದಿಂದ ಶಿವಲಿಂಗಕ್ಕೆ ಅಭಿಷೇಕ ಮಾಡಿದ ಮೊಮ್ಮಗ!
ಬೆಂಕಿ ಆವರಿಸುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ ಸ್ಥಳೀಯರು. . ತಕ್ಷಣ ಸ್ಥಳಕ್ಕೆ ಆಗಮಿಸಿದ ಮೂರ್ನಾಲ್ಕು ಅಗ್ನಿ ಶಾಮಕ ವಾಹನ, ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ಸುತ್ತಮುತ್ತ ನೂರಾರು ಜನರು ಜಮಾಯಿಸಿದ್ದರಿಂದ ಕೆಲಕಾಲ ಎನ್‌ಟಿ ರಸ್ತೆ, ಬೈಪಾಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಂಚಾರ ಠಾಣೆ ಪೊಲೀಸರು ಹರಸಾಹಸ ಪಡುವಂತಾಯಿತು.
ಅಪ್ಪ ಮಾಡಿದ್ದು ಅದೊಂದು ತಪ್ಪು: ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಅಮಾಯಕ ವಿದ್ಯಾರ್ಥಿನಿ ಬಲಿ!
ಮಾಜಿ ಉದ್ಯೋಗಿ ಬೆಂಕಿ ಹಚ್ಚಿದ ಆರೋಪ
ಇನ್ನು ಶೋ ರೂಂಗೆ ಬೆಂಕಿ ಹೇಗೆ ಹೊತ್ತಿಕೊಂಡಿತು ಎಂದು ವಿಚಾರಿಸಿದಾಗ ಈ ಹಿಂದೆ ಅಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಉದ್ಯೋಗಿಯೇ ಬೆಂಕಿ ಹಚ್ಚಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಪೊಲೀಸರು ಓರ್ವ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ